ದೇಶ

ರಾಜಿಗೆ ಪೊಲೀಸರ ಒತ್ತಡ: ಬಾಲಕಿ ಪೋಷಕರ ಆರೋಪ

Srinivasamurthy VN

ಪಂಜಾಬ್: ಲೈಂಗಿಕ ಕಿರುಕುಳಕ್ಕೆ ಒಳಗಾಗಿ, ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆಸೆದಿದ್ದರಿಂದ ಮೃತಪಟ್ಟ ೧೩ ವರ್ಷದ ಬಾಲಕಿಯ ಸಾವು ಪ್ರಕರಣವನ್ನು ರಾಜಿ ಮಾಡಿಕೊಳ್ಳುವಂತೆ ಪೊಲೀಸರು ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆಂದು ಮೃತ ಬಾಲಕಿಯ ಪೋಷಕರು ಆರೋಪ ವ್ಯಕ್ತಪಡಿಸುತ್ತಿದ್ದಾರೆ.

ಘಟನೆ ಸಂಭವಿಸಿದ ಬಸ್ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ಒಡೆತನದ ಕಂಪನಿಗೆ ಸೇರಿದ್ದಾದರಿಂದ ಘಟನೆಯನ್ನು ಮುಚ್ಚಿಹಾಕುವ ಸಲುವಾಗಿ ರಾಜಿ ಮಾಡಿಕೊಳ್ಳುವಂತೆ ಪೊಲೀಸರು ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆಂದು ಆರೋಪಿಸಿರುವ ಬಾಲಕಿಯ ಪೋಷಕರು ಪೊಲೀಸರ ಈ ಕ್ರಮಕ್ಕೆ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆ ತೀವ್ರತೆ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸುತ್ತಮುತ್ತಲೂ ಪೊಲೀಸ್ ಸರ್ಪಗಾವಲಾಕಿದ್ದು, ಆಸ್ಪತ್ರೆ ಒಳ ಪ್ರವೇಶಕ್ಕೆ ಬಾಲಕಿಯ ಪೋಷಕರಿಗೆ ನಿರ್ಬಂಧ ಹೇರಲಾಗಿದೆ ಎಂದು ಹೇಳಲಾಗುತ್ತಿದೆ.

ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ಒಡೆತನದ ಕಂಪನಿಗೆ ಸೇರಿದ ಬಸ್ ನಲ್ಲಿ ಸಂಬಂಧಿಕರ ಭೇಟಿಗಾಗಿ 13 ವರ್ಷದ ಬಾಲಕಿ ಹಾಗೂ ಆಕೆಯ ತಾಯಿ ಚಲಿಸುತ್ತಿದ್ದರು. ಈ ವೇಳೆ ಬಸ್ ನಲ್ಲಿದ್ದ ಕಾಮುಕರು ಇಬ್ಬರಿಗೂ ಲೈಂಗಿಕ ಕಿರುಕುಳ ನೀಡಿ ನಂತರ ಬಸ್ ನಿಂದ ಹೊರದಬ್ಬಿದ್ದರು. ಘಟನೆಯಲ್ಲಿ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಳು. ತಾಯಿಯ ಸ್ಥಿತಿ ಈಗಲೂ ಚಿಂತಾನಕವಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.

SCROLL FOR NEXT