ವಕೋಲ ಪೊಲೀಸ್ ಠಾಣೆ 
ದೇಶ

ಪಿಎಸ್ ಐ ರನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಎಸ್ ಐ

ಮುಂಬೈ ಪೊಲೀಸ್ ಠಾಣೆಯ ಅಧಿಕಾರಿಯೋರ್ವ ತನ್ನ ಮೇಲಧಿಕಾರಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ನಡೆದಿದೆ.

ಮುಂಬೈ: ಮುಂಬೈ ಪೊಲೀಸ್ ಠಾಣೆಯ ಅಧಿಕಾರಿಯೋರ್ವ ತನ್ನ ಮೇಲಧಿಕಾರಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ನಡೆದಿದೆ.

ಮುಂಬೈನ ವೊಕೋಲಾ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ವಿಲಾಸ್ ಜೋಷಿ ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ ಅಸಿಸ್ಟೆಂಟ್ ಸಬ್‌ಇನ್‌ಸ್ಪೆಕ್ಟರ್ ದಿಲೀಪ್ ಶಿರ್ಕೆ ನಂತರ ತಾನೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಈ ಘಟನೆಯಿಂದಾಗಿ ಈ ಭಾಗದ ಜನ ಬೆಚ್ಚಿಬಿದ್ದಿದ್ದಾರೆ.

ರಜೆಗೆ ಸಂಬಂಧಪಟ್ಟಂತೆ ಪೊಲೀಸ್ ಇಲಾಖೆ ಶಿರ್ಕೆ ವಿರುದ್ಧ ಕೈಗೊಂಡಿದ್ದ ತನಿಖೆಗೆ ಸಂಬಂಧಿಸಿದಂತೆ ಶಿರ್ಕಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ ಕಳೆದ ಕೆಲವು ದಿನಗಳಿಂದ ತೀವ್ರ ಖಿನ್ನತೆಗೊಳಗಾಗಿದ್ದರು. ಇನ್ನು ಎಸ್ ಐ ಶಿರ್ಕೆ ಅವರ ಸಾವಿಗೆ ಪೊಲೀಸ್ ಆಯುಕ್ತರೇ ಕಾರಣ ಎಂದು ಅವರ ಮಗ ಆಪಾದಿಸಿದ್ದಾರೆ. ಈ ಪ್ರಕರಣ ಇದೀಗ ಮುಂಬೈನಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದ್ದು, ನಾಗರಿಕರ ಆಕ್ರೋಶಕ್ಕೆ ತುತ್ತಾಗಿದೆ.

ಈ ಘಟನೆ ಕುರಿತಂತೆ ವಿವರ ನೀಡಿರುವ ಮುಂಬೈ ಪೊಲೀಸ್ ಆಯುಕ್ತ ರಾಕೇಶ್ ಮರಿಯ ಅವರು, ವೊಕೋಲಾ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ವಿಲಾಸ್ ಜೋಷಿ ಅವರ ಚೇಂಬರ್‌ಗೆ ಹೋದ ಎಎಸ್‌ಐ ದಿಲೀಪ್ ಶಿರ್ಕೆ ಅಲ್ಲಿ ಅವರೊಂದಿಗೆ ವಾಗ್ವಾದ ನಡೆಸಿದ್ದಾನೆ. ಕೊನೆಗೆ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ ಎಂದಿದ್ದಾರೆ. ಮೂರು ಸುತ್ತು ಗುಂಡು ಹಾರಿಸಿದ ಶಿರ್ಕೆ ತಾನೂ ಶೂಟ್ ಮಾಡಿಕೊಂಡು ಮೃತಪಟ್ಟಿಸದ್ದಾನೆ. ವಿಲಾಸ್ ಜೋಷಿ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೆ ಇಲ್ಲಿನ ಲೀಲಾವತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ರಾಕೇಶ್ ಮರಿಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!