ದೇಶ

ಐಐಟಿ ವಿದ್ಯಾರ್ಥಿ ಆತ್ಮಹತ್ಯೆ

ಮುಂಬೈ: ಐಐಟಿ ಬಾಂಬೆಯ ಮೂರನೇ ವರ್ಷದ ಕೆಮಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೊವೈನಲ್ಲಿರುವ ಸಂಸ್ಥೆಯ ಆವರಣದಲ್ಲಿರುವ ಹಾಸ್ಟೆಲ್ ಟೆರೇಸ್ ನಲ್ಲಿ ಆತನ ಮೃತದೇಹ ಪತ್ತೆಯಾಗಿದೆ. ವಿಷಸೇವಿಸಿ ಆತ ಸಾವಿಗೀಡಾಗಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ವಿದ್ಯಾರ್ಥಿಯನ್ನು ಹರಿಯಾಣ ಮೂಲದ ಜಿತೇಶ್ ಶರ್ಮಾ ಎಂದು ಗುರುತಿಸಲಾಗಿದೆ. ಮೃತ ದೇಹದ ಬಳಿ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಬರೆಯಲಾಗಿರುವ ನೋಟ್ ಸಿಕ್ಕಿದೆ. ಹೀಗಾಗಿ ಶರ್ಮಾ ಖಿನ್ನತೆಯಿಂದ ಬಳಲುತ್ತಿದ್ದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

SCROLL FOR NEXT