ವಿವಾಹಿತ ಮಹಿಳೆ- ಕುಮಾರ ವಿಶ್ವಾಸ್ 
ದೇಶ

ಅಕ್ರಮ ಸಂಬಂಧ ಆರೋಪ, ಬಿಜೆಪಿ, ಕಾಂಗ್ರೆಸ್‌ನ ಷಡ್ಯಂತ್ರ: ಕುಮಾರ್ ವಿಶ್ವಾಸ್

ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಅವರು, ನನ್ನ ವಿರುದ್ಧ...

ನವದೆಹಲಿ: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಅವರು, ನನ್ನ ವಿರುದ್ಧ ವಿನಾಕಾರಣ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಸೋಮವಾರ ಹೇಳಿದ್ದಾರೆ.

ಅಕ್ರಮ ಸಂಬಂಧದ ಬಗ್ಗೆ ಇಂದು ಸ್ಪಷ್ಟನೆ ನೀಡಿದ ಕುಮಾರ್ ವಿಶ್ವಾಸ್, ಮಹಿಳೆಗೂ ನನಗೂ ಯಾವುದೇ ಸಂಬಂಧ ಇಲ್ಲ. ಅನಗತ್ಯವಾಗಿ ಮಹಿಳೆಯ ಹೆಸರಿನೊಂದಿಗೆ ನನ್ನ ಹೆಸರನ್ನು ತಳಕು ಹಾಕಲಾಗುತ್ತಿದೆ. ಇದರ ಹಿಂದೆ ಬಿಜೆಪಿ ಹಾಗೂ ಕಾಂಗ್ರೆಸ್ ವ್ಯವಸ್ಥಿತ ಷಡ್ಯಂತ್ರ ರೂಪಿಸಿವೆ ಎಂದು ಆರೋಪಿಸಿದರು. ಅಲ್ಲದೆ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕೇಸ್ ದಾಖಲಿಸುವುದಾಗಿ ಎಚ್ಚರಿಸಿದ್ದಾರೆ.

ಇದೇ ವೇಳೆ ಮಾಧ್ಯಮಗಳ ವಿರುದ್ಧವೂ ವಾಗ್ದಾಳಿ ನಡೆಸಿದ ಆಪ್ ನಾಯಕ, ಮಾಧ್ಯಮಗಳ ಕಚೇರಿಗಳು ಭ್ರಷ್ಟಾಚಾರದ ಕೇಂದ್ರಗಳಾಗಿವೆ. ಇದರಲ್ಲಿ ಕೆಲವು ಮಾಧ್ಯಮ ಪ್ರತಿನಿಧಿಗಳು ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಇನ್ನು ಮಹಿಳಾ ಆಯೋಗದ ನೋಟಿಸ್ ಬಗ್ಗೆ ಪ್ರತಿಕ್ರಿಯಿಸಿದ ಕುಮಾರ್ ವಿಶ್ವಾಸ್, ನನಗೆ ಇದುವರೆಗೂ ಯಾವುದೇ ನೋಟಿಸ್ ಬಂದಿಲ್ಲ. ನೋಟಿಸ್ ಬಂದ ನಂತರ ಅದಕ್ಕೆ ಉತ್ತರಿಸುವುದಾಗಿ ಹೇಳಿದರು.

ತಮ್ಮೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆಂಬ ಮಾಧ್ಯಮ ಸುದ್ದಿಯ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿದೇ ಮೌನ ವಹಿಸಿದ್ದ
ಕುಮಾರ್ ವಿಶ್ವಾಸ್ ವಿರುದ್ದ ಆಪ್ ಕಾರ್ಯಕರ್ತೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಈ ಸಂಬಂಧ ಮಹಿಳಾ ಆಯೋಗ ಕುಮಾರ್ ವಿಶ್ವಾಸ್ ಅವರಿಗೆ ನೋಟಿಸ್ ಸಹ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!