ಸುಪ್ರೀಂಕೋರ್ಟ್ 
ದೇಶ

3 ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಿ: ರಾಜ್ಯಕ್ಕೆ ಸುಪ್ರೀಂ ಆದೇಶ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಮೂರು ತಿಂಗಳೊಳಗಾಗಿ...

ನವದೆಹಲಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಮೂರು ತಿಂಗಳೊಳಗಾಗಿ ಬಿಬಿಎಂಪಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.

ಆರು ತಿಂಗಳ ಕಾಲ ತಡೆ ನೀಡಿದ್ದ ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪನ್ನು ರದ್ದುಪಡಿಸಿರುವ ಸುಪ್ರೀಂಕೋರ್ಟ್ ಪೀಠ ಬಿಬಿಎಂಪಿಗೆ 3 ತಿಂಗಳೊಳಗೆ ಚುನಾವಣೆ ನಡೆಸುವಂತೆ ಸೂಚಿಸಿದೆ.

ಆಡಳಿತರೂಢ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬಿಬಿಎಂಪಿ ವಿಭಜನೆ ಮಾಡಲು ಮತ್ತು ಚುನಾವಣೆ ತಡೆಯಲು ಸಾಕಷ್ಟು ಕಸರತ್ತು ನಡೆಸಿತ್ತು. ಏತನ್ಮಧ್ಯೆ ಕಾನೂನು ಹೋರಾಟದಲ್ಲಿ ಬಿಬಿಎಂಪಿ ಚುನಾವಣೆ ಕುರಿತಂತೆ ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪನ್ನು ರದ್ದುಪಡಿಸಿ ಆರು ತಿಂಗಳೊಳಗೆ ಚುನಾವಣೆ ನಡೆಸಿ ಎಂದು ವಿಭಾಗೀಯ ಪೀಠ  ತೀರ್ಪು ನೀಡಿತ್ತು. ಆದರೆ ಈ ತೀರ್ಪನ್ನು ಪ್ರಶ್ನಿಸಿ ಬಿಬಿಎಂಪಿ ಸದಸ್ಯರು, ರಾಜ್ಯ ಚುನಾವಣಾ ಆಯೋಗ, ರಾಜ್ಯ ಬಿಜೆಪಿ ಘಟಕ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮೇ 30ರೊಳಗೆ ಚುನಾವಣೆ ನಡೆಸಿ ಎಂದು ಮೊದಲು ಆದೇಶ ನೀಡಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪನ್ನು ಎತ್ತಿಹಿಡಿದಿದೆ.

ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಪರ ವಕೀಲ ಕಪಿಲ್ ಸಿಬಲ್ 3 ತಿಂಗಳ ಕಾಲಾವಕಾಶ ಕೋರಿದ್ದರು. ಆ ನಿಟ್ಟಿನಲ್ಲಿ ಮೊದಲು 3 ತಿಂಗಳೊಳಗೆ ಚುನಾವಣೆ ನಡೆಸಿ, ನಂತರ ಬಿಬಿಎಂಪಿ ವಿಭಜಿಸಿ ಎಂದು ಆದೇಶ ನೀಡಿದೆ.

ಮೂರು ತಿಂಗಳೊಳಗೆ ಚುನಾವಣೆ ನಡೆಸುತ್ತೇವೆ. ಚುನಾವಣೆ ಬಳಿಕವೇ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಶುರು ಮಾಡುತ್ತೇವೆ ಎಂದು ರಾಜ್ಯ ಸರ್ಕಾರ ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!