ಸಲ್ಮಾನ್ ಖಾನ್ 
ದೇಶ

2002ರ ಹಿಟ್ ಆಂಡ್ ರನ್ ಪ್ರಕರಣ: ಸಲ್ಮಾನ್ ಖಾನ್ ತಪ್ಪಿತಸ್ಥ, 10 ವರ್ಷ ಜೈಲು ಶಿಕ್ಷೆ ಸಾಧ್ಯತೆ

2002ರ ಹಿಟ್ ಆಂಟ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧದ ಎಲ್ಲಾ ಆರೋಪಗಳು ಸಾಬೀತಾಗಿದ್ದು, ಸಲ್ಮಾನ್ ಖಾನ್...

ಮುಂಬೈ: 2002ರ ಹಿಟ್ ಆಂಟ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧದ ಎಲ್ಲಾ ಆರೋಪಗಳು ಸಾಬೀತಾಗಿದ್ದು, ಸಲ್ಮಾನ್ ಖಾನ್ ತಪ್ಪಿತಸ್ಥ ಎಂದು ಮುಂಬೈ ಸೆಷನ್ಸ್ ಕೋರ್ಟ್‌ ಬುಧವಾರ ತೀರ್ಪು ನೀಡಿದೆ.

ಸುದೀರ್ಘ 12 ವರ್ಷಗಳ ಕಾಲ ಪ್ರಕರಣದ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್, ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಇಂದು ಬೆಳಗ್ಗೆ 11.15ಕ್ಕೆ ತೀರ್ಪು ಪ್ರಕಟಿಸಿದ ಜಡ್ಜ್ ಡಿ.ವಿ.ದೇಶಾಪಂಡೆ ಅವರು, ಸಲ್ಮಾನ್ ವಿರುದ್ಧದ ಉದ್ದೇಶರಹಿತ ಮಾನವ ಹತ್ಯೆ ಆರೋಪ, ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಚಾಲನೆ ಮಾಡಿದ ಆರೋಪ, ಕುಡಿದು ವಾಹನ ಚಾಲನೆ, ಅತಿ ವೇಗ, ಅಜಾಗರೂಕತೆಯಿಂದ ಚಾಲನೆ ಮಾಡಿದ ಆರೋಪ ಸಾಬೀತಾಗಿವೆ ಎಂದು ಹೇಳಿದರು.

2002, ಸೆಪ್ಟೆಂಬರ್ 28ರಂದು ಮದ್ಯಪಾನ ಸೇವಿಸಿ ಕಾರು ಚಲಾಯಿಸುತ್ತಿದ್ದ ಸಲ್ಮಾನ್ ಖಾನ್, ತನ್ನ ಕಾರನ್ನು ಮುಂಬೈ ಉಪನಗರದ ಬಾಂದ್ರಾದ ಬೇಕರಿಯೊಂದಕ್ಕೆ ನುಗ್ಗಿಸಿದ ಕಾರಣ ಫುಟ್‌ಪಾತ್‌ನಲ್ಲಿ ಮಲಗಿದ್ದ ಐವರಲ್ಲಿ ಒಬ್ಬ ಸಾವಿಗೀಡಾಗಿದ್ದ. ಈ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಮೇಲೆ ಉದ್ದೇಶಪೂರ್ವಕವಲ್ಲದ ಕೊಲೆ ಪ್ರಕರಣ ದಾಖಲಿಸಲಾಗಿತ್ತು.

ಹಲವು ಅನಿರೀಕ್ಷಿತ ಬೆಳವಣಿಗೆಗಳಿಗೆ ಸಾಕ್ಷಿಯಾಗಿದ್ದ 12 ವರ್ಷ ಹಳೆಯ ಗುದ್ದೋಡು ಪ್ರಕರಣದಲ್ಲಿ ಸಲ್ಮಾನ್ ಖಾನ್ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣ ಇನ್ನು ಪ್ರಕಟಿಸಿಲ್ಲವಾದರೂ ಬಾಲಿವುಡ್ ನಟನಿಗೆ 10 ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆ ಇದೆ.

ತೀರ್ಪು ಹಿನ್ನೆಲೆಯಲ್ಲಿ ಮುಂಬೈ ಸೆಷನ್ಸ್ ಕೋರ್ಟ್ ಸುತ್ತಲೂ ಬಿಗಿಭದ್ರತೆ ಏರ್ಪಡಿಸಲಾಗಿದೆ. ಕೇವಲ ವಕೀಲರು, ಮಾಧ್ಯಮದವರಿಗೆ ಮಾತ್ರ ಪ್ರವೇಶ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT