ಪಟಾಕಿ ಕಾರ್ಖಾನೆ ಸ್ಫೋಟ 10 ಮಂದಿ ದಾರುಣ ಸಾವು
ಅಕ್ರಮ ಪಟಾಕಿ ಉತ್ಪಾದನಾ ಕಾರ್ಖಾನೆ ಸ್ಫೋಟಿಸಿ ಸುಮಾರು 10 ಮಂದಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಪಶ್ಚಿಮ ಬಂಗಾಳದ ಮಿಡ್ನಾಪುರ ಜಿಲ್ಲೆಯ ಬ್ರಹಾಮನ್ ಗ್ರಾಮದಲ್ಲಿ ನಡೆದಿದೆ.
ಮಿಡ್ನಾಪುರ: ಅಕ್ರಮ ಪಟಾಕಿ ಉತ್ಪಾದನಾ ಕಾರ್ಖಾನೆ ಸ್ಫೋಟಿಸಿ ಸುಮಾರು 10 ಮಂದಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಪಶ್ಚಿಮ ಬಂಗಾಳದ ಮಿಡ್ನಾಪುರ ಜಿಲ್ಲೆಯ ಬ್ರಹಾಮನ್ ಗ್ರಾಮದಲ್ಲಿ ನಡೆದಿದೆ.
ಇನ್ನು ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆಯಿದೆ ಎಂದು ಎಸ್ಪಿ ಭಾರತಿ ಘೋಷ್ ಹೇಳಿದ್ದಾರೆ.
ಘಟನೆ ನಡೆದ ನಂತರ ಪರಾರಿಯಾಗಿದ್ದ ಕಾರ್ಖಾನೆ ಮಾಲೀಕ ರಂಜನ್ ಮೈತಿ ಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ತೃಣಮೂಲ ಕಾಂಗ್ರೆಸ್ ಬೆಂಬಲಿಗ ಎನ್ನಲಾಗಿದೆ.
ಪಟಾಕಿ ಕಾರ್ಖಾನೆ ಹೆಸರಲ್ಲಿ ಬಾಂಬ್ ತಯಾರಿಸುತ್ತಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕಾರ್ಖಾನೆಯಲ್ಲಿ ಸ್ಫೋಟಗೊಂಡಾಗ ತೀವ್ರ ಶಬ್ದ ಕೇಳಿಸಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆ ಪಕ್ಕದ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.