ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಸದ್ಯಕ್ಕೆ ರಿಲೀಫ್ ಸಿಕ್ಕಿದೆ. ರಾಹುಲ್ ವಿರುದ್ಧದ ಎಲ್ಲಾ ಆರೋಪಗಳ ವಿಚಾರಣೆಗೆ ಸುಪ್ರಿಂ ಕೋರ್ಟ್ ಬ್ರೇಕ್ ನೀಡಿದೆ.
ತಮ್ಮ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆಯನ್ನು ಕ್ರಿಮಿನಲ್ ಬದಲಿಗೆ ಸಿವಿಲ್ ಪ್ರಕರಣ ಎಂದು ಪರಿಗಣಿಸುವಂತೆ ಕೋರಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದರು.
2014ರ ಲೋಕಸಭೆ ಚುನಾವಣಾ ರ್ಯಾಲಿ ವೇಳೆ ಆರ್ ಎಸ್ ಎಸಿ ವಿರುದ್ಧ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಕೊಂದಿದ್ದು ಆರ್ ಎಸ್ ಎಸ್ ಎಂದು ಆರೋಪ ಮಾಡಿದ್ದರು.
ಈ ಸಂಬಂಧ ಆರ್ ಎಸ್ ಎಸ್ ಕಾರ್ಯಕರ್ತ ರಾಜೇಶ್ ಕುಂಟೆ ಎಂಬುವರು ಭಿವಂಡಿ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ಕೇಸ್ ಅನ್ನು ವಜಾಗೊಳಿಸುವಂತೆ ರಾಹುಲ್ ಗಾಂಧಿ ಬಾಂಬೆ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ರು. ಆದ್ರೆ ಬಾಂಬೆ ಉಚ್ಚ ನ್ಯಾಯಾಲಯ ಮಾರ್ಚ್ 10 ರಂದು ರಾಹುಲ್ ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ರಾಹುಲ್ ಗಾಂಧಿ ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದರು. .