ಸಾಂದರ್ಭಿಕ ಚಿತ್ರ 
ದೇಶ

ಕೆರೆ ಒತ್ತುವರಿಗೆ ಕೋಟಿ ದಂಡ

ಬೆಳ್ಳಂದೂರು ಮತ್ತು ಆಗರ ಕೆರೆಗಳ ನಡುವೆ ಅಕ್ರಮವಾಗಿ ಮತ್ತು ನಿಯಮ ಮೀರಿ ಕಟ್ಟಡ ನಿರ್ಮಿಸಿ, ರಾಜಕಾಲುವೆ ಸೇರಿದಂತೆ ಕೆರೆಗಳ ಜಲಮೂಲಗಳಿಗೆ ಹಾನಿ ಮಾಡಿರುವ ಮಂತ್ರಿ ಟೆಕ್ ಝೋನ್ ಪ್ರೈವೇಟ್ ಲಿಮಿಟೆಡ್‍ಗೆ ರು. 117.35 ಕೋಟಿ ಮತ್ತು ಕೋರ್ ಮೈಂಡ್ ಸಾಫ್ಟ್ ವೇರ್ ಅಂಡ್...

ನವದೆಹಲಿ: ಬೆಳ್ಳಂದೂರು ಮತ್ತು ಆಗರ ಕೆರೆಗಳ ನಡುವೆ ಅಕ್ರಮವಾಗಿ ಮತ್ತು ನಿಯಮ ಮೀರಿ ಕಟ್ಟಡ ನಿರ್ಮಿಸಿ, ರಾಜಕಾಲುವೆ ಸೇರಿದಂತೆ ಕೆರೆಗಳ ಜಲಮೂಲಗಳಿಗೆ ಹಾನಿ ಮಾಡಿರುವ ಮಂತ್ರಿ ಟೆಕ್ ಝೋನ್ ಪ್ರೈವೇಟ್ ಲಿಮಿಟೆಡ್‍ಗೆ ರು. 117.35 ಕೋಟಿ ಮತ್ತು ಕೋರ್ ಮೈಂಡ್ ಸಾಫ್ಟ್ ವೇರ್ ಅಂಡ್ ಸರ್ವೀಸ್ ಪ್ರೈವೇಟ್ ಲಿಮಿಟೆಡ್‍ಗೆ ರು.22.5 ಕೋಟಿ ದಂಡ ವಿಧಿಸಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಆದೇಶ ನೀಡಿದೆ.

ದಂಡದ ಮೊತ್ತವನ್ನು ಈ ಸಂಸ್ಥೆಗಳು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಪಾವತಿಸಬೇಕು. ಮಂಡಳಿಯು ಈ ಮೊತ್ತ ಬಳಸಿ ಎರಡೂ ಕಂಪನಿಗಳು ಉಂಟು ಮಾಡಿರುವ ಕೆರೆಗಳ ಜಲಮೂಲ ಮತ್ತಿತರ ಪರಿಸರ ಹಾನಿಯನ್ನು ನಿವಾರಿಸಿ, ಪರಿಸರ ಪುನಶ್ಚೇತನಗೊಳಿಸಬೇಕು ಎಂದು ಆದೇಶಿಸಿದೆ.

ಇದಷ್ಟೇ ಅಲ್ಲ, ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿ ಬೆಂಗಳೂರಿನ ಇತರ ಕೆರೆಗಳ ಒತ್ತುವರಿ ಬಗ್ಗೆಯೂ ಅಧ್ಯಯನ ಮಾಡಿ, ಅಲ್ಲಿನ ಜಲ ಮೂಲದ ಬಗ್ಗೆ ವರದಿ ನೀಡುವಂತೆಯೂ ಪೀಠ ಸೂಚನೆ ನೀಡಿದೆ.

ರಾಜ್ಯಸಭೆಯಲ್ಲಿ ಪ್ರಸ್ತಾಪ

  • ಕಾಕತಾಳೀಯವೆಂಬಂತೆ, ರಾಜ್ಯಸಭೆಯಲ್ಲಿ ರಾಜೀವ್ ಚಂದ್ರಶೇಖರ್ ಬೆಂಗಳೂರಿನ ಕೆರೆಗಳ ಅಕ್ರಮ ಒತ್ತುವರಿ ಬಗ್ಗೆ ಗಮನ ಸೆಳೆದರು. ನಗರದ ಕೆರೆಗಳಲ್ಲಿ ಮನೆ ಕಟ್ಟಲು ಒಪ್ಪಿಗೆ ಕೊಟ್ಟವರ
  • ಸಂಬಂಧ ಪರಿಸರ ಸಚಿವಾಲಯ ಲೆಕ್ಕ ಪರಿಶೋಧನೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಅತ್ಯುಗ್ರ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಪರಿಸರ ಸಚಿವ ಪ್ರಕಾಶ್ ಜಾವಡೇಕರ್, ಈ ಬಗ್ಗೆ ತಕ್ಷಣವೇ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌

JDS ಪಾದಯಾತ್ರೆಯಲ್ಲಿ ರೈತರಿಲ್ಲ, ಪಕ್ಷದ ಕಾರ್ಯಕರ್ತರ ಕರೆತಂದಿದ್ದಾರೆ; ನಿಖಿಲ್‌ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಡಿಕೆ ಶಿವಕುಮಾರ್‌ ವ್ಯಂಗ್ಯ