ದೇಶ

ವ್ಯಾಪಂ ಹಗರಣ: 8ನೇ ಆರೋಪಿಯ ನಿಗೂಢ ಸಾವು

ವ್ಯಾಪಂ ಹಗರಣದ 8ನೇ ಆರೋಪಿ ವಿಜಯ್ ಸಿಂಗ್ ಶವವಾಗಿ ಪತ್ತೆಯಾಗಿದ್ದಾರೆ......

ಭೋಪಾಲ್: ವ್ಯಾಪಂ ಹಗರಣದ 8ನೇ ಆರೋಪಿ ವಿಜಯ್ ಸಿಂಗ್ ಶವವಾಗಿ ಪತ್ತೆಯಾಗಿದ್ದಾರೆ. ಛತ್ತೀಸ್ ಗಡದ ಕಾಂಕೇರ್ ಜಿಲ್ಲೆಯ ಲಾಡ್ಜ್ ವೊಂದರಲ್ಲಿ ವಿಜಯ್ ಸಿಂಗ್ ಶವ ಪತ್ತೆಯಾಗಿದೆ.  ಪ್ರಕರಣದ ಪ್ರಮುಖ ಆರೋಪಿ ವಿಜಯ್ ಸಿಂಗ್ ಫಾರ್ಮಾಸಿಸ್ಟ್ ಆಗಿದ್ದ. ಹಲವು ರಾಜಕೀಯ ನಾಯಕರುಗಳೊಂದಿಗೆ ಒಡನಾಟ ಇಟ್ಟುಕೊಂಡಿದ್ದ.
ಶವವನ್ನು ವಶಕ್ಕೆ ಪಡೆದಿರುವ ಪೊಲೀಸರು ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ. ವಿಜಯ್ ಸಿಂಗ್ ಕತ್ತು ಹಾಗೂ ಮೊಣಕೈ ಮೇಲೆ ಗಾಯದ ಗುರುತುಗಳಿದ್ದು ಇದೊಂದು ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ.
ಇತ್ತೀಚೆಗಷ್ಟೇ ಮಧ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ಮಗ ಶೈಲೇಶ್ ಕೂಡ ನಿಗೂಢವಾಗಿ ಸಾವನ್ನಪ್ಪಿದ್ದರು. ಅದರ ಬೆನ್ನಲ್ಲೇ ವ್ಯಾಪಂ ಹಗರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಮದ್ಯಪ್ರದೇಶ ವೃತ್ತಿಪರ ಶಿಕ್ಷಣ ಇಲಾಖೆಯ ಪರೀಕ್ಷಾ ಮಂಡಳಿಯಲ್ಲಿ ಕೋಟ್ಯಾಂತರ ರೂಪಾಯಿ ಹಣ ದುರುಪಯೋಗವಾಗಿದೆ ಎಂದು ಲೆಕ್ಕ ಪರಿಶೋಧನೆ ವರದಿಯಲ್ಲಿ ಬಹಿರಂಗವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!