ಶಶಿ ಕಪೂರ್ 
ದೇಶ

ಹಿರಿಯ ನಟ ಶಶಿ ಕಪೂರ್ ಗೆ ಪಾಲ್ಕೆ ಪ್ರಶಸ್ತಿ ಪ್ರಧಾನ

ಬಾಲಿವುಡ್ ನ ಹಿರಿಯ ನಟ, ನಿರ್ಮಾಪಕ ಶಶಿ ಕಪೂರ್ ಅವರಿಗೆ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು....

ಮುಂಬೈ: ಬಾಲಿವುಡ್ ನ ಹಿರಿಯ ನಟ, ನಿರ್ಮಾಪಕ ಶಶಿ ಕಪೂರ್ ಅವರಿಗೆ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುಂಬೈನ ಫೃಥ್ವಿ  ಥಿಯೇಟರ್ ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅರುಣ್ ಜೈಟ್ಲಿ , ನಟ ಶಶಿ ಕಪೂರ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದ್ರು.
ಈ ವೇಳೆ ಮಾತನಾಡಿದ ಸಚಿವ ಅರುಣ್ ಜೈಟ್ಲಿ ಭಾರತೀಯ ಚಿತ್ರರಂಗಕ್ಕೆ ಶಶಿ ಕಪೂರ್ ಅವರ ಕೊಡುಗೆ ಅಪಾರ ಎಂದರು. ಹಲವು ಸದಭಿರುಚಿಯ ಚಿತ್ರಗಳಲ್ಲಿ ನಟಿಸಿ, ನಿರ್ಮಿಸಿರುವ ಶಶಿಕಪೂರ್ ಅವರ ಸಾಧನೆಯನ್ನು ಕೊಂಡಾಡಿದ್ರು.
ಶಶಿಕಪೂರ್ ಪುತ್ರಿ ಸಂಜನಾ ಕಪೂರ್ ಸೇರಿದಂತೆ ಕಪೂರ್ ಕುಟಂುಬಸ್ಥರು ಸಮಾರಂಭದಲ್ಲಿ ಭಾಗವಹಿಸಿದ್ದರು.
2014 ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಶಶಿಕಪೂರ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಮಾರ್ಚ್ 3ರಂದು ನಡೆದ ಸಮಾರಂಭದಲ್ಲಿ ಅವರು ದೆಹಲಿಗೆ ತೆರಳಿ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇಂದು ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಏರ್ಪಡಿಸಲಾಗಿತ್ತು
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್, ಹಿರಿಯ ನಟಿಯರಾದ ಹೇಮಮಾಲಿನಿ, ರೇಖಾ, ಶಬನಾ ಅಜ್ಮಿ, ಜಯಪ್ರದಾ, ಜೀನತ್ ಅಮಾನ್ ಸೇರಿದಂತೆ ಬಾಲಿವುಡ್ ನ ಹಲವು ಹಿರಿ-ಕಿರಿಯ ನಟರು ಸಮಾರಂಭದಲ್ಲಿ ಭಾಗವಹಿಸಿದ್ದರು.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT