ಉಧಮ್ ಪುರ್ (ಸಂಗ್ರಹ ಚಿತ್ರ) 
ದೇಶ

ಕಣಿವೆಗೆ ಉರುಳಿದ ಬಸ್: ಕನಿಷ್ಟ 15 ಸಾವು, 20ಕ್ಕೂ ಹೆಚ್ಚು ಮಂದಿ ಗಂಭೀರ

ಜಮ್ಮು ಮತ್ತು ಕಾಶ್ಮೀರದ ಉಧಮ್ ಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ವೊಂದು ಕಣಿವೆಗೆ ಉರುಳಿದ ಪರಿಣಾಮ ಕನಿಷ್ಟ 15 ಮಂದಿ ಸಾವನ್ನಪ್ಪಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಮ್ ಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ವೊಂದು ಕಣಿವೆಗೆ ಉರುಳಿದ ಪರಿಣಾಮ ಕನಿಷ್ಟ 15 ಮಂದಿ ಸಾವನ್ನಪ್ಪಿದ್ದಾರೆ.

ಪ್ರಯಾಣಿಕರ ಬಸ್ ಲತ್ತಿ ಬೆಲ್ಟ್ ನಿಂದ ಉಧಮ್ ಪುರಕ್ಕೆತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಪೈಕಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಪ್ರಸ್ತುತ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅಲ್ಲದೆ ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕವಾಗಿ ಜಿಎಂಸಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು ಗಾಯಾಳುಗಳ ರಕ್ಷಣೆಗಾಗಿ ಸೇನಾ ಹೆಲಿಕಾಪ್ಟರ್ ಗಳನ್ನು ಕೂಡ ಬಳಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ