ಜಯಲಲಿತಾ 
ದೇಶ

ಜಯಾ ಮತ್ತೆ ತಮಿಳುನಾಡು ಸಿಎಂ, ಮೇ 17ಕ್ಕೆ ಪ್ರಮಾಣವಚನ?

ಕಾನೂನು ಹೋರಾಟದಲ್ಲಿ ಹಾಗೂ ರಾಜಕೀಯ ಜೀವನದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ....

ಚೆನ್ನೈ: ಕಾನೂನು ಹೋರಾಟದಲ್ಲಿ ಹಾಗೂ ರಾಜಕೀಯ ಜೀವನದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಜಯಲಲಿತಾ ಅವರು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ನಿರ್ದೋಷಿ ಎಂದು ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿದ್ದು, ತಕ್ಷಣದಿಂದಲೇ ಅವರು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಬಹುದು. ಆದರೆ ಮೂಲಗಳ ಪ್ರಕಾರ ಮೇ 17ಕ್ಕೆ ಜಯಲಲಿತಾ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ತೀರ್ಪು ಪ್ರಕಟವಾಗುತ್ತಿದ್ದಂತೆ ತಮಿಳುನಾಡು ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಸೇರಿದಂತೆ ಇಡೀ ಸಚಿವ ಸಂಪುಟವೇ ಚೆನ್ನೈನಲ್ಲಿರುವ ಜಯಲಲಿತಾ ಅವರ ಪೋಯಸ್ ಗಾರ್ಡನ್ ನಿವಾಸಕ್ಕೆ ಆಗಮಿಸಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರು ಸೇರಿ ಇತರೆ ಮೂವರು ಆರೋಪಿಗಳು ನಿರ್ದೋಷಿ ಎಂದು ಹೈಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT