ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಸಂಗಮ್ ಪ್ರದೇಶದಲ್ಲಿ ಸೋಮವಾರ ಉಗ್ರರು ದಾಳಿ ಮಾಡಿದ್ದು, ದಾಳಿಯಲ್ಲಿ ಓರ್ವ ಸಿಆರ್‌ಪಿಎಫ್ ಅಧಿಕಾರಿ ಸೇರಿದಂತೆ ಇಬ್ಬರು ಸಿಬ್ಬಂದಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಹಾತ್ಮುಲ್ಲಾದಲ್ಲಿ ಕರ್ತವ್ಯನಿರತ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಉಗ್ರರು ದಾಳಿ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಹುತಾತ್ಮರಾದ ಸಿಬ್ಬಂದಿಯನ್ನು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಓಂಕಾರ್ ಸಿಂಗ್ ಮತ್ತು ಪೇದೆ ತಿಲಕ್ ರಾಜ್ ಎಂದು ಗುರುತಿಸಲಾಗಿದೆ.
ಸ್ಥಳದಲ್ಲಿ ಹೆಚ್ಚಿನ ರಕ್ಷಣಾ ಸಿಬ್ಬಂದಿ ನಿಯೋಜಿಸಲಾಗಿದ್ದು, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.