ರಾಜ್ಯಸಭೆ 
ದೇಶ

ಭೂಸ್ವಾಧೀನ ವಿಧೇಯಕ ಸಮಿತಿಗೆ ರಾಜ್ಯಸಭೆಯಿಂದ 10 ಸದಸ್ಯರ ನೇಮಕ

ಪ್ರತಿಪಕ್ಷಗಳ ತೀವ್ರ ವಿರೋಧ ಹಾಗೂ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅನಿವಾರ್ಯವಾಗಿ ಭೂಸ್ವಾಧೀನ ವಿಧೇಯಕವನ್ನು ಸಂಸತ್ತಿನ ಜಂಟಿ ಸಮಿತಿ...

ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧ ಹಾಗೂ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅನಿವಾರ್ಯವಾಗಿ ಭೂಸ್ವಾಧೀನ ವಿಧೇಯಕವನ್ನು ಸಂಸತ್ತಿನ ಜಂಟಿ ಸಮಿತಿ ಪರಿಶೀಲನೆಗೆ ಒಪ್ಪಿಸಿದ್ದು, ಇಂದು ಈ ಸಮಿತಿಗೆ ರಾಜ್ಯಸಭೆಯಿಂದ 10 ಸದಸ್ಯರನ್ನು ಆಯ್ಕೆ ಮಾಡಲಾಗಿದೆ.

ಬಿಜೆಪಿಯಿಂದ ಪ್ರಭಾತ್ ಜಾ ಮತ್ತು ರಾಮ್ ನರೇನ್ ದುದಿ, ಕಾಂಗ್ರೆಸ್‌ನಿಂದ ದಿಗ್ವಿಜಯ್ ಸಿಂಗ್, ಜೈರಾಮ್ ರಮೇಶ್ ಮತ್ತು ಪಿ.ಎಲ್.ಪುನಿಯಾ, ಸಮಾಜವಾದಿ ಪಕ್ಷದಿಂದ ರಾಮ್ ಗೋಪಾಲ್ ಯಾದವ್, ಜೆಡಿಯುನಿಂದ ಶರದ್ ಯಾದವ್, ತೃಣಮೂಲ ಕಾಂಗ್ರೆಸ್‌ನಿಂದ ಡೆರೆಕ್ ಒಬ್ರೇನ್, ಬಿಎಸ್‌ಪಿಯಿಂದ ರಾಜಪಾಲ್ ಸಿಂಗ್ ಸೈನಿ ಮತ್ತು ಎನ್‌ಸಿಪಿಯಿಂದ ಶರದ್ ಪವಾರ್ ಅವರನ್ನು ಸಂಸತ್ತಿನ ಜಂಟಿ ಸಮಿತಿಗೆ ಆಯ್ಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಸ್ವಾಧೀನ ವಿಧೇಯಕ ಸಂಬಂಧ ನಿನ್ನೆ ಲೋಕಸಭೆ 30 ಸದಸ್ಯರ ಜಂಟಿ ಸಮಿತಿ ರಚಿಸಿತ್ತು. ಲೋಕಸಭೆ ಮತ್ತು ರಾಜ್ಯಸಭೆ ಜಂಟಿ ಸಮಿತಿ ಈ ವಿಧೇಯಕವನ್ನು ಪರಿಶೀಲಿಸಿ ಮುಂಗಾರು ಅಧಿವೇಶನದ ಮೊದಲ ದಿನ ತನ್ನ ವರದಿ ಸಲ್ಲಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!