ಪಣಜಿ: ಗೋವಾದ ಬಿಜೆಪಿ ಶಾಸಕ ಸುಭಾಷ್ ಪಲ್ ದೇಸಾಯಿ ಅವರು ಚಲಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಗೋವಾ ಶಾಸಕರ ಕಾರು ಮುಂದೆ ಚಲಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಆಯತಪ್ಪಿ ಕೆಳಗೆ ಬಿದ್ದ ಈ ವೇಳೆ ಶಾಸಕರ ಕಾರು ಸವಾರನ ಮೇಲೆ ಹರಿದಿದ್ದು, ತೀವ್ರ ರಕ್ತಸ್ರಾವದಿಂದಾಗಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪಣಜಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.