ಹೊಂಡಾ ಸಿಟಿ ಕಾರು 
ದೇಶ

ಬಸ್‍ಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಹೊಂಡಾ ಸಿಟಿ: ಇಬ್ಬರ ಸಾವು, 6 ಮಂದಿಗೆ ಗಾಯ

ಬಸ್ ಗಾಗಿ ಕಾಯುತ್ತಿದ್ದವರ ಮೇಲೆ ಕಾರು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು 6 ಜನರು ಗಾಯಗೊಂಡಿರುವ ಘಟನೆ ಹೊಸೂರು ರಸ್ತೆಯಲ್ಲಿರುವ ಎನ್ನಾಗರ ಗೇಟ್‌ ಬಸ್‌ ನಿಲ್ದಾಣದ ಬಳಿ ನಡೆದಿದೆ...

ಬೆಂಗಳೂರು: ಬಸ್ ಗಾಗಿ ಕಾಯುತ್ತಿದ್ದವರ ಮೇಲೆ ಕಾರು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು 6 ಜನರು ಗಾಯಗೊಂಡಿರುವ ಘಟನೆ ಹೊಸೂರು ರಸ್ತೆಯಲ್ಲಿರುವ ಎನ್ನಾಗರ ಗೇಟ್‌ ಬಸ್‌ ನಿಲ್ದಾಣದ ಬಳಿ ನಡೆದಿದೆ.

ಎನ್ನಾಗರ ಗೇಟ್ ಬಸ್ ನಿಲ್ದಾಣದಲ್ಲಿ 8 ರಿಂದ 10 ಮಂದಿ ಬಸ್ಸಿಗಾಗಿ ಕಾಯುತ್ತಿದ್ದವರು. ಈ ವೇಳೆ ವೇಗವಾಗಿ ಬಂದ ಹೊಂಡಾ ಸಿಟಿ ಕಾರು ಏಕಾಏಕಿ ಜನರ ಮೇಲೆ ಹರಿಯಿತು. ಘಟನೆಯಲ್ಲಿ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅಪಘಾತದಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸೂರು ಕಡೆಯಿಂದ ವೇಗವಾಗಿ ಬಂದ ಹೊಂಡಾ ಸಿಟಿ ಕಾರು ಇವರ ಮೇಲೆ ಹರಿದಿದೆ. ಈ ಸಂಬಂಧ ಚಾಲಕ ಕಾರ್ತಿಕ್‍ನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದು, ಆತ ಕುಡಿದು ಕಾರು ಚಾಲನೆ ಮಾಡುತ್ತಿದ್ದ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel