ಅರವಿಂದ್ ಕೇಜ್ರಿವಾಲ್ 
ದೇಶ

ಎಎಪಿಯಿಂದ ಐಎಎಸ್‌ ಅಧಿಕಾರಿಯ ತೇಜೋವಧೆ: ಕೇಜ್ರಿವಾಲ್ ವಿರುದ್ಧ ಕಿರಣ್ ರಿಜಿಜು ವಾಗ್ದಾಳಿ

ಆಮ್ ಆದ್ಮಿ ಪಕ್ಷದ ತೀವ್ರ ವಿರೋದ ನಡುವೆಯೂ ದೆಹಲಿ ಸರ್ಕಾರದ ಉಸ್ತುವಾರಿ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿರುವ ಅಸ್ಸಾಂ ಮೂಲದ ಹಿರಿಯ ಐಎಎಸ್‌...

ನವದೆಹಲಿ: ಆಮ್ ಆದ್ಮಿ ಪಕ್ಷದ ತೀವ್ರ ವಿರೋದ ನಡುವೆಯೂ ದೆಹಲಿ ಸರ್ಕಾರದ ಉಸ್ತುವಾರಿ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿರುವ ಅಸ್ಸಾಂ ಮೂಲದ ಹಿರಿಯ ಐಎಎಸ್‌ ಅಧಿಕಾರಿ ಶಕುಂತಲಾ ಡೋಲೆ ಗಾಮ್ಲಿನ್‌ ಅವರ ತೇಜೋವಧೆ ಮಾಡುವ ಮೂಲಕ  ಎಎಪಿ ಸರ್ಕಾರ  ಈಶಾನ್ಯ ರಾಜ್ಯಗಳಿಗೆ ಮತ್ತು ನೇಪಾಳದ ಜನತೆಗೆ ಅವಮಾನ ಮಾಡುತ್ತಿದೆ ಎಂದು ಕೇಂದ್ರ  ಗೃಹ ಖಾತೆಯ ರಾಜ್ಯ ಸಚಿವ ಕಿರಣ್‌ ರಿಜಿಜು ಹೇಳಿದ್ದಾರೆ.

ಲೆಫ್ಟಿನೆಂಟ್‌ ಗವರ್ನರ್‌ ನಜೀಬ್‌ ಜಂಗ್‌ ಅವರು ಶಕುಂತಲಾ ಅವರನ್ನು ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದ್ದರು. ಅದರಂತೆ ಶಕುಂತಲಾ ಶನಿವಾರ ಅಧಿಕಾರ ಸ್ವೀಕರಿಸಿದ್ದರು. ಇದಕ್ಕೆ ಆಮ್ ಆದ್ಮಿ ಪಕ್ಷ  ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದಲ್ಲದೆ ಅಧಿಕಾರ ವಹಿಸಿಕೊಳ್ಳದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಸೂಚಿಸಿದ್ದು ಸರಿಯಲ್ಲ ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷ ಶಕುಂತಲಾ ನೇಮಕವು ಸಂವಿಧಾನ ವಿರೋಧಿ ಎಂದು ಹೇಳುತ್ತಿದೆ. ಆದರೆ, ವಾಸ್ತವದಲ್ಲಿ ಹಿರಿಯ ಐಎಎಸ್‌ ಅಧಿಕಾರಿಯೊಬ್ಬರ ತೇಜೋವಧೆ ಮಾಡುವ ಮೂಲಕ ಎಎಪಿ ಸರ್ಕಾರವೇ ಸಂವಿಧಾನ ವಿರೋಧಿಯಾಗಿ ಕೆಲಸ ಮಾಡುತ್ತಿದೆ ಎಂದು ರಿಜಿಜು ಆರೋಪಿಸಿದರು.

ಶಕುಂತಾ ಅವರ ಅಸಮರ್ಥರು ಎಂದು ಎಎಪಿ ಆರೋಪಿಸುತ್ತಿದೆ. ಆದರೆ,  ಯಾವುದೇ ಭ್ರಷ್ಟಾಚಾರ ಆರೋಪ ಅವರ ಮೇಲಿಲ್ಲ. ಅವರ ಮೇಲೆ ಯಾವುದೇ ದಾಖಲೆ ಇಲ್ಲದೆ ದೆಹಲಿ ಮುಖ್ಯಮಂತ್ರಿ ಅಸಂವಿಧಾನಿಕ ಪದಗಳನ್ನು ಪ್ರಯೋಗಿಸುತ್ತಿದ್ದಾರೆ ಎಂದು ರಿಜಿಜು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?