ಮಂಗೋಲಿಯಾದಲ್ಲಿ ಮೋದಿ 
ದೇಶ

ಮಂಗೋಲಿಯಾ ಪ್ರವಾಸದಲ್ಲಿ ಮೋದಿ: 1 ಬಿಲಿಯನ್ ಡಾಲರ್ ನೆರವು ಘೋಷಣೆ

ಚೀನಾ ಪ್ರವಾಸ ಯಶಸ್ವಿಯಾಗಿ ಮುಕ್ತಾಯಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾನುವಾರದಿಂದ ಮಂಗೋಲಿಯಾ ಪ್ರವಾಸ ಕೈಗೊಂಡಿದ್ದು ಅಲ್ಲಿನ ಅಭಿವೃದ್ಧಿಗೆ ಸಂಪೂರ್ಣ ನೆರವು ಘೋಷಿಸಿದ್ದಾರೆ.

ಉಲಾನ್ ಬಟರ್: ಚೀನಾ ಪ್ರವಾಸ ಯಶಸ್ವಿಯಾಗಿ ಮುಕ್ತಾಯಗೊಳಿಸಿರುವ  ಪ್ರಧಾನಿ ನರೇಂದ್ರ ಮೋದಿ, ಭಾನುವಾರದಿಂದ ಮಂಗೋಲಿಯಾ ಪ್ರವಾಸ ಕೈಗೊಂಡಿದ್ದು ಅಲ್ಲಿನ ಅಭಿವೃದ್ಧಿಗೆ ಸಂಪೂರ್ಣ ನೆರವು ಘೋಷಿಸಿದ್ದಾರೆ.

ಮಂಗೋಲಿಯಾದ ರಾಜಧಾನಿ ಉಲಾನ್ ಬಟರ್ ನಲ್ಲಿರುವ ಪವಿತ್ರ ಧಾರ್ಮಿಕ ಕ್ಷೇತ್ರ  ಗಂದಾನ್ ತೆಗ್‌ಚಿನ್‌ಲೆಂಗ್ ಬೌದ್ಧಧಾಮಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಮಾತನಾಡಿರುವ ಪ್ರಧಾನಿ ಮೋದಿ, ಮಂಗೋಲಿಯಾದ ಅಭಿವೃದ್ಧಿಗೆ 1 ಬಿಲಿಯನ್ ಡಾಲರ್ ನೆರವು ಘೋಷಿಸಿದ್ದಾರೆ.

ಮಂಗೋಲಿಯಾ ಭಾರತದ ಆಧ್ಯಾತ್ಮಿಕ ನೆರೆ ರಾಷ್ಟ್ರವಾಗಿದೆ. ಇಲ್ಲಿಗೆ ಭೇಟಿ ನೀಡಿದ ಮೊದಲ ಭಾರತದ ಪ್ರಧಾನಿ ತಾವಾಗಿದ್ದು,  ದೊರೆತ ಸ್ವಾಗತಕ್ಕೆ ತಾವು  ಆಭಾರಿಯಾಗಿರುವುದಾಗಿ ತಿಳಿಸಿದ್ದಾರೆ.

ಮಂಗೋಲಿಯಾ ಭೇಟಿಯಿಂದ ಭಾರತ-ಮಂಗೋಲಿಯಾ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಂತರಿಕ ಭದ್ರತೆ, ವಿಮಾ ಸಾರ್ವಜನಿಕ ವಲಯಗಳಲ್ಲಿ ಉಭಯ ದೇಶಗಳ ನಡುವೆ ಮಹತ್ವದ ಒಪ್ಪಂದ ಸೇರಿದಂತೆ 29 ಒಪ್ಪಂದಗಳಿಗೆ ಮಂಗೋಲಿಯಾ ಪ್ರಧಾನಿ ಹಾಗೂ ಮೋದಿ ಸಹಿ ಹಾಕಿದ್ದಾರೆ. ಮಂಗೋಲಿಯಾ ಸಂಸತ್ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!