ದೆಹಲಿ: ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿವಾದ ಸಂಬಂಧ ನಿನ್ನೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.ಸಭೆಯಲ್ಲಿ ಅಧಿಕಾರಿಗಳ ನೇಮಕಕ್ಕೆ ಸಂಬಂಧಿಸಿದಂತೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅವರು ತಿಳಿಸುವ ಪ್ರಯತ್ನ ಮಾಡಲಿದ್ದಾರೆ.
ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು.ಸಂಬಧಪಟ್ಟ ಸಚಿವರ ಗಮನಕ್ಕೆ ತಾರದೇ ಯಾವುದೇ ಕೆಲಸಗಳನ್ನು ಮಾಡಬಾರದು ಎಂಬುದಿತ್ತು. ದೆಹಲಿ ಸರ್ಕಾರದ ಹಲವು ಅಧಿಕಾರಿಗಳು ದೆಹಲಿ ಸಿಎಂ ಕೇಜ್ರಿವಾಲ್ ಅವರ ಕೈಕೆಳಗೆ ಕೆಲಸ ಮಾಡಲು ತಮಗೆ ಇಷ್ಟವಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಅಧಿಕಾರಿಗಳ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ಈ ಸಭೆ ಕರೆದಿದ್ದಾರೆ.