ಕೇಂದ್ರ ಜಂಗ್ ಮೂಲಕ ದೆಹಲಿ ಸರ್ಕಾರ ನಡೆಸಲು ಯತ್ನಿಸುತ್ತಿದೆ: ಕೇಜ್ರಿವಾಲ್
ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಹಸ್ತಕ್ಷೇಪ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್...
ನವದೆಹಲಿ: ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಹಸ್ತಕ್ಷೇಪ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದು, ಕೇಂದ್ರ ಸರ್ಕಾರ ನಜೀಬ್ ಜಂಗ್ ರ ಮೂಲಕ ದೆಹಲಿ ಸರ್ಕಾರ ನಡೆಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಪ್ರಧಾನಿ ಮೋದಿ ಅವರಿಗೆ ಬರೆದಿರುವ ಪತ್ರದಲ್ಲಿ ಅರವಿಂದ್ ಕೇಜ್ರಿವಾಲ್, ದೆಹಲಿ ಸರ್ಕಾರದ ಆಡಳಿತದಲ್ಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರು ವಿನಾಃ ಕಾರಣ ಹಸ್ತಪಕ್ಷೇಪ ಮಾಡುತ್ತಿದ್ದಾರೆ. ನಜೀಬ್ ಜಂಗ್ ರ ಮೂಲಕ ದೆಹಲಿ ಸರ್ಕಾರದಲ್ಲಿ ಹಿಡಿತ ಸಾಧಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ದೆಹಲಿಯಲ್ಲಿ ಪ್ರಜಾಪ್ರಭುತ್ವ ಸರ್ಕಾರ ಅಸ್ತಿತ್ವದಲ್ಲಿದೆ. ಆಪ್ ಪಕ್ಷ ಆಡಳಿತ ನಡೆಸಲು ಅನುವು ಮಾಡಿಕೊಡಬೇಕು. ಉಪರಾಜ್ಯಪಾಲರ ಮೂಲಕ ದೆಹಲಿ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಕೇಂದ್ರ ಸರ್ಕಾರದ ಈ ನಡೆ ಕಾನೂನು ಬಾಹಿರ ಎಂದಿರುವ ಕೇಜ್ರಿವಾಲ್, ಸರ್ಕಾರದ ಅಧಿಕಾರ ಮೊಟಕುಗೊಳಿಸಲು ಯತ್ನಿಸಬಾರದು ಎಂದು ತಿಳಿಸಿದ್ದಾರೆ.
ದೆಹಲಿ ಮುಖ್ಯ ಕಾರ್ಯದರ್ಶಿ ನೇಮಕ ಸಂಬಂಧ ಅರವಿಂದ್ ಕೇಜ್ರಿವಾಲ್ ಹಾಗೂ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರ ನಡುವೆ ಜಂಗೀಕುಸ್ತಿ ಏರ್ಪಟ್ಟಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.