ದೇಶ

ಈ ವರ್ಷವೇ ರಾಹುಲ್ ಕಾಂಗ್ರೆಸ್ ಅಧ್ಯಕ್ಷರಾಗುವ ನಿರೀಕ್ಷೆ ಇದೆ: ಜೈರಾಮ್ ರಮೇಶ್

Lingaraj Badiger

ಹೈದರಾಬಾದ್: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಈ ವರ್ಷವೇ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಳ್ಳುವ ಸಾಧ್ಯತೆ ಇದೆ ಎಂದು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್ ಅವರು ಬುಧವಾರ ಹೇಳಿದ್ದಾರೆ.

'2015ರಲ್ಲೇ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ ಮತ್ತು ಅದನ್ನು ನಾವು ಸಹ ನಿರೀಕ್ಷಿಸುತ್ತಿದ್ದೇವೆ' ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಜೈರಾಮ್ ರಮೇಶ್ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ರಾಜ್ಯಗಳಲ್ಲಿ ನಾಯಕತ್ವದ ಹೊಸ ಪಡೆ ಸೃಷ್ಟಿ ಮಾಡುವ ಪಣ ತೊಟ್ಟಿದ್ದಾರೆ ಎಂದು ಮಾಜಿ ಸಚಿವರು ತಿಳಿಸಿದ್ದಾರೆ.

'ನಮಗೆ ರಾಜ್ಯಮಟ್ಟದ ನಾಯಕತ್ವದ ಅಗತ್ಯ ಇದೆ. ಏಕೆಂದರೆ ನಾವು ಕೇವಲ ರಾಷ್ಟ್ರ ಮಟ್ಟದ ಚುನಾವಣೆಗಳಲ್ಲಿ ಮಾತ್ರ ಸ್ಪರ್ಧಿಸುತ್ತಿಲ್ಲ. ರಾಜ್ಯಗಳಲ್ಲೂ ಸ್ಪರ್ಧಿಸುತ್ತಿದ್ದೇವೆ' ಎಂದಿದ್ದಾರೆ.

SCROLL FOR NEXT