ದೇಶ

ಸಹೋದರಿಗೆ ಕಿರುಕುಳ: ಮಾವನನ್ನು ಬಡಿದು ಕೊಂದ ಸಹೋದರರು

ಸಹೋದರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ಸಹೋದರಿಯ ಮಾವನನ್ನು ಥಳಿಸಿ ಕೊಂದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆಸಿದೆ.

ಥಾಣೆ: ಸಹೋದರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ಸಹೋದರಿಯ ಮಾವನನ್ನು ಥಳಿಸಿ ಕೊಂದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆಸಿದೆ.

ಆರೋಪಿ ದಶರಥ ಠಾಕ್ರೆಯ ಸಹೋದರಿಯನ್ನು ಬದನೇವಾಡಿಗೆ ಮದುವೆ ಮಾಡಿಕೊಡಲಾಗಿತ್ತು. ಸಹೋದರಿಗೆ ಮಾವ ಕಿರುಕುಳ ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ವಿಚಾರಿಸಲು ತಮ್ಮ ಇಬ್ಬರು ಸಹೋದರರೊಂದಿಗೆ ಬದನೇವಾಡಿಗೆ ದಶರಥ ಠಾಕ್ರೆ ಬಂದಿದ್ದಾನೆ.

ಈ ವೇಳೆ ಸಹೋದರಿಯ ಮಾವ 56 ವರ್ಷದ ದಾಮೋ ಡಾಗ್ಡೋ ವಾಗ್ ಜತೆ ಮಾತಿಗೆ ಮಾತು ಬೆಳೆದು ದೊಣ್ಣೆಯಿಂದ ಅವರಿಗೆ ಹೊಡೆದಿದ್ದಾನೆ. ಈ ಜಗಳದಲ್ಲಿ ದಾಮೋ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಉಪ ಪೊಲೀಸ್ ಅಧೀಕ್ಷಕ ಬಚ್ಚನ್ ಸಿಂಗ್ ತಿಳಿಸಿದ್ದಾರೆ.

ಘಟನೆ ಬಳಿಕ ದಶರಥ ಠಾಕ್ರೆ, ಇಬ್ಬರು ಸಹೋದರರಾದ ಕಿಶನ್ ಠಾಕ್ರೆ ಹಾಗೂ ಗುಲಾಬ್ಬಿ ಠಾಕ್ರೆಯನ್ನು ಬಂಧಿಸಿದ್ದು, ಇವರ ವಿರುದ್ಧ ಸೆಕ್ಷನ್ 302, 324, 504ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ