ನರೇಂದ್ರ ಮೋದಿ 
ದೇಶ

ದೆಹಲಿಯ ರಾಜಪಥದಲ್ಲಿ ಪ್ರಧಾನಿ ಮಾಡಲಿದ್ದಾರೆ ಯೋಗ

ಮೊದಲ ಅಂತಾರಾಷ್ಟ್ರೀಯ ದಿನಾಚರಣೆಯನ್ನು ದೆಹಲಿಯ ರಾಜಪಥದಲ್ಲಿ ಸ್ವತಃ ಯೋಗ ಪ್ರದರ್ಶನ ಮಾದಲಿದ್ದಾರೆ.

ನವದೆಹಲಿ:  ವಿಶ್ವಸಂಸ್ಥೆ ಜೂನ್.21 ನ್ನು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಎಂದು ಘೋಷಿಸುವುದಕ್ಕೆ ಮಹತ್ವದ ಪಾತ್ರ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ  ಐತಿಹಾಸಿಕ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದಾರೆ.

ಮೊದಲ ಅಂತಾರಾಷ್ಟ್ರೀಯ ದಿನಾಚರಣೆಯನ್ನು ದೆಹಲಿಯ ರಾಜಪಥದಲ್ಲಿ ಸ್ವತಃ ಯೋಗ ಪ್ರದರ್ಶನ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತೊಮೆ ಸಂಚಲನ ಮೂಡಿಸಲಿದ್ದಾರೆ. ವಿದೇಶಪ್ರವಾಸಗಳಲ್ಲಿ ಅಲ್ಲಿನ ನಾಯಕರೊಂದಿಗೆ ಸೆಲ್ಫಿ ತೆಗೆಸಿಕೊಂಡು ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡುವುದು, ಸ್ವಾತಂತ್ರ್ಯ ದಿನಾಚರಣೆಯಂದು ಸಿದ್ಧ ಭಾಷಣಕ್ಕೆ ಸಡ್ಡು ಹೊಡೆಯುವ ಮೂಲಕ ಮೂಲಕ ಹೊಸತನವನ್ನು ಪರಿಚಯಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ದೇಶದ ಶಕ್ತಿ ಕೇಂದ್ರವಿರುವ ರಾಜಪಥದಲ್ಲಿ ಸಂಪುಟ ಸಚಿವರೊಂದಿಗೆ  ಸ್ವತಃ ಯೋಗಾಭ್ಯಾಸ ಮಾದಲಿದ್ದಾರೆ.  

ಜೂನ್.21 ರಂದು ನಡೆಯಲಿರುವ ಕಾಯ್ರಕ್ರಮದಲ್ಲಿ ಶಾಲಾ ಮಕ್ಕಳು ಸೇರಿದಂತೆ ಸುಮಾರು 16 ,೦೦೦ ಜನರು ಭಾಗವಹಿಸುವ ನಿರೀಕ್ಷೆ ಇದ್ದು ಬೆಳ್ಳಿಗ್ಗೆ 7 ರಿಂದ 7 :30 ವರೆಗೆ ಕಾರ್ಯಕ್ರಮ ನಡೆಯಲಿದೆ.  ಮೊದಲ ಆಚರಣೆಯನ್ನು ಸ್ಮರಣೀಯವಾಗಿ ಆಚರಿಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ರಾಜಪಥವನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಅತಿ ದೊಡ್ಡ ಯೋಗ ಕಾರ್ಯಕ್ರಮವಾಗಿರುವುದರಿಂದ ಈ ಬಗ್ಗೆ ಗಿನ್ನಿಸ್ ದಾಖಲೆಯ ಪುಸ್ತಕಕ್ಕೆ ಸಂಬಂಧಿಸಿದವರಿಗೆ ಮಾಹಿತಿ ನೀಡಲಾಗಿದೆ.

ಇಷ್ಟೇ ಅಲ್ಲದೇ ಯೋಗ ಕಲಿಸಲು ಭಾರತದಿಂದ ಯೋಗ ಗುರುಗಳನ್ನು ವಿದೇಶಕ್ಕೆ  ಕಳಿಸಿಕೊಡುವ ಮೂಲಕ ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ ವಿನೂತನವಾಗಿ ನಡೆಯಲಿದೆ. ವಿಶ್ವಸಂಸ್ಥೆಯಲ್ಲಿ ಪ್ರಥಮ ಬಾರಿಗೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಜೂನ್.21 ರನ್ನು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನಾಗಿ ಘೋಷಿಸಲು ಕರೆ ನೀಡಿದ್ದರು. ಕಳೆದ ವರ್ಷ ಡಿಸೆಂಬರ್ ನಲ್ಲಿ ವಿಶ್ವಸಂಸ್ಥೆ ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಸಮ್ಮತಿ ಸೂಚಿಸಿತ್ತು. ಇದಕ್ಕೆ ವಿಶ್ವಾದ್ಯಂತ ಉತಮ ಪ್ರತಿಕ್ರಿಯೆ ದೊರೆತಿದ್ದು ಸುಮಾರು 170 ಕ್ಕೂ ಹೆಚ್ಚು ರಾಷ್ಟ್ರಗಳು ಯೋಗ ದಿನಾಚರಣೆ ಆಚರಿಸಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT