ಆರ್ ಕೆ ಪಚೌರಿ 
ದೇಶ

ಪಚೌರಿ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಸಾಬೀತು?

ಹವಾಮಾನ ಬದಲಾವಣೆಗೆ ಸಂಬಂಧಿಸಿದ ಅಂತರ್ ಸರ್ಕಾರಿ ಸಮಿತಿ(ಐಪಿಸಿಸಿ)ಯ ಮಾಜಿ ಅಧ್ಯಕ್ಷ ರಾಜೇಂದ್ರ ಕೆ. ಪಚೌರಿ ಅವರು ಕಿರಿಯ ಸಹೋದ್ಯೋಗಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದು ನಿಜ ಎಂದು..

ನವದೆಹಲಿ: ಹವಾಮಾನ ಬದಲಾವಣೆಗೆ ಸಂಬಂಧಿಸಿದ ಅಂತರ್ ಸರ್ಕಾರಿ ಸಮಿತಿ(ಐಪಿಸಿಸಿ)ಯ ಮಾಜಿ ಅಧ್ಯಕ್ಷ ರಾಜೇಂದ್ರ ಕೆ. ಪಚೌರಿ ಅವರು ಕಿರಿಯ ಸಹೋದ್ಯೋಗಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದು ನಿಜ ಎಂದು ತನಿಖೆಯಿಂದ ತಿಳಿದುಬಂದಿದೆ.

ಪಚೌರಿ ವಿರುದ್ಧ ದೂರು ದಾಖಲಿಸಿದ್ದ ಸಂಶೋಧನಾ ವಿಶ್ಲೇಷಕಿ ನಿರ್ದೋಷಿಯಾಗಿದ್ದು, ಆಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಸ್ಪಷ್ಟವಾಗಿದೆ ಎಂದು ಎನರ್ಜಿ ಆ್ಯಂಡ್ ರಿಸೋರ್ಸ್ ಇನ್ ಸ್ಟಿಟ್ಯೂಟ್ ನಡೆಸಿದ ಆಂತರಿಕ ತನಿಖೆಯಿಂದ ಬಹಿರಂಗವಾಗಿದೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ಜತೆಗೆ, ಪಚೌರಿ ವರ್ತನೆ ಅವರು ಅಧಿಕಾರ ದುರ್ಬಳಕೆ ಮಾಡಿದ್ದಾರೆ, ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ಸಂಸ್ಥೆಯ ನಿಯಮ ಉಲ್ಲಂಘಿಸಿದ್ದಾರೆ ಎಂಬುದನ್ನು ಸಾಬೀತು ಮಾಡಿದೆ ಎಂದು ಆಂತರಿಕ ದೂರು ಸಮಿತಿ(ಐಸಿಸಿ)ಯ ಮೂಲಗಳು ತಿಳಿಸಿವೆ.

ಆರೋಪ ಸಾಬೀತಾದದ್ದೇ ಆದಲ್ಲಿ, ವಿಶಾಖಾ ಮಾರ್ಗಸೂಚಿಯನ್ವಯ ದಾಖಲಾದ ದೂರಿನಲ್ಲಿ ಶಿಕ್ಷೆಗೊಳಗಾದ ಮೊದಲ ವ್ಯಕ್ತಿ ಎಂಬ ಕುಖ್ಯಾತಿಗೆ ಅವರು ಪಾತ್ರರಾಗಲಿದ್ದಾರೆ. ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‍ಪಾಲ್ ವಿರುದ್ಧವೂ ಇದೇ ಮಾರ್ಗ ಸೂಚಿಯನ್ವಯ ದೂರು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಕ್ರೇನ್ ನಲ್ಲಿ ರಷ್ಯಾ ಡ್ರೋನ್ ದಾಳಿ: ಭಾರತೀಯರ ಒಡೆತನದ ಔಷಧ ಘಟಕ ಧ್ವಂಸ, ಓರ್ವ ಸಾವು, ಹಲವರಿಗೆ ಗಾಯ! Video

SIR: ‘ಜ್ಞಾನೇಶ್ ಕುಮಾರ್ ಬಿಜೆಪಿಯ ಅಸ್ತ್ರ, SIR ರದ್ದುಪಡಿಸಿ': ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆಗೆ ಠಾಕ್ರೆ ಸೋದರ ಸಂಬಂಧಿಗಳ ಆಗ್ರಹ!

ಸೈನಿಕನ ಪಾರ್ಥಿವ ಶರೀರ ಹೊತ್ತ ಆ್ಯಂಬುಲೆನ್ಸ್ ಅಪಘಾತ; 4 ಸಾವು, ಕುಟುಂಬದ ಗಂಡು ಸಂತತಿಯೇ ನಾಶ!

ಪ್ರಿಯತಮೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಗಂಡ; ಪ್ರಶ್ನಿಸಿದ್ದಕ್ಕೆ ಕಾರಿನ ಬಾನೆಟ್ ಮೇಲೆ ಪತ್ನಿಯನ್ನೇ ಎಳೆದೊಯ್ದ!-Video

‘ನಿವೃತ್ತಿಗೂ ಮುನ್ನ ಈ ದಾಖಲೆ ಬೇಕು’: 92 ರನ್ ಗೆ ಔಟಾದ ರೋಹಿತ್ ಶರ್ಮಾಗೆ ಗವಾಸ್ಕರ್ ಟಾರ್ಗೆಟ್!