ಬೆಂಕಿ ಅವಘಡ 
ದೇಶ

ಚೀನಾದ ವೃದ್ಧಾಶ್ರಮದಲ್ಲಿ ಬೆಂಕಿ ದುರಂತ: 38 ವೃದ್ಧರ ಸಾವು

ಚೀನಾದಲ್ಲಿನ ವೃದ್ಧಾಶ್ರಮವೊಂದರಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 38 ಮಂದಿ ವೃದ್ಧರು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ.

ಬೀಜಿಂಗ್‌: ಚೀನಾದಲ್ಲಿನ ವೃದ್ಧಾಶ್ರಮವೊಂದರಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 38 ಮಂದಿ ವೃದ್ಧರು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ.

ದಕ್ಷಿಣ ಚೀನಾದ ಹೆನಾನ್‌ ಪ್ರಾಂತ್ಯದ ಪಿಂಗ್‌ಡಿಂಗ್‌ಶಾನ್‌ ವೃದ್ಧಾಶ್ರಮದಲ್ಲಿ ಕಳೆದ ತಡ ರಾತ್ರಿ ಅಗ್ನಿ ಅನಾಹುತ ಸಂಭವಿಸಿದೆ ಎಂದು ಚೀನಾದ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.

ಈ ವಸತಿ ಸಮುಚ್ಛಯದಲ್ಲಿ ವೃದ್ಧರು ವಾಸ ಮಾಡುತ್ತಿದ್ದರು. ಎಲ್ಲರು ಮಲಗಿದ್ದ ವೇಳೆ ಈ ಅಗ್ನಿ ಅವಘಡ ಸಂಭವಿಸಿದ್ದು, 38 ಮಂದಿ ಸಜೀವ ದಹನವಾಗಿದ್ದಾರೆ. ಇನ್ನುಳಿದಂತೆ 6 ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಾರ್ಟ್‌ಮೆಂಟ್‌ಗೆ ಬೆಂಕಿ ತಗುಲಿ ದಟ್ಟವಾದ ಹೊಗೆ ಕಂಡುಬಂದಾಗ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕೆ ಬರುವುದರೊಳಗೆ 30 ಜನರು ಬೆಂಕಿಗೆ ಆಹುತಿಯಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT