ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ವಿಧಿಸಿದ್ದ ವಿಚಾರಣಾಧೀನ ನ್ಯಾಯಾಲಯ ನಿರ್ಧಾರ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಾಪಸ್ ಪಡೆದಿದ್ದಾರೆ.
ಕಳೆದ ಲೋಕಸಭೆ ಚುನಾವಣೆ ವೇಳೆ ಭ್ರಷ್ಟರ ಪಟ್ಟಿಯಲ್ಲಿ ತಮ್ಮ ಹೆಸರು ಪ್ರಕಟಿಸಿದ್ದಕ್ಕಾಗಿ ನಿತಿನ್ ಗಡ್ಕರಿ ಅವರು ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಸಂಬಂಧ ಕೇಜ್ರಿವಾಲ್ ಅವರಿಗೆ ಕೋರ್ಟ್ ನೋಟಿಸ್ ಸಹ ನೀಡಿತ್ತು. ಅಲ್ಲದೆ ಜಾಮೀನು ಪಡೆಯಲು ನಿರಾಕರಿಸಿದ ಕೇಜ್ರಿವಾಲ್ ಅವರನ್ನು ಬಂಧಿಸಿ ತಿಹಾರ್ ಜೈಲಿಗೂ ಕಳುಹಿಸಲಾಗಿತ್ತು.
ಇದು ಇಬ್ಬರು ನಾಯಕರ ಪ್ರತಿಷ್ಠೆಯ ಪ್ರಕರಣವಾಗಿದ್ದು, ಎರಡೂ ಬಣದವರನ್ನು ಕರೆದು ಮಾತನಾಡಿ ಪ್ರಕರಣವನ್ನು ಒಮ್ಮತದಿಂದ ಇತ್ಯರ್ಥ ಪಡಿಸಿಕೊಳ್ಳುವಂತೆ ಮನವೊಲಿಸಲು ಉಭಯ ತಂಡಗಳು ನ್ಯಾಯಾವಾದಿಗಳಿಗೆ ನ್ಯಾಯಲಯ ಸೂಚಿಸಿತ್ತು. ಆದರೆ ಒಮ್ಮತಕ್ಕೆ ಬರದ ಹಿನ್ನೆಲೆಯಲ್ಲಿ ಕೋರ್ಟ್ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು.