ಸಾಂದರ್ಭಿಕ ಚಿತ್ರ 
ದೇಶ

ಅತಿಥಿಗೃಹದ ಮೇಲೆ ದಾಳಿ: 4 ಉಗ್ರರನ್ನು ಹೊಡೆದುರುಳಿಸಿದ ಸೇನೆ

ಎರಡು ದಿನಗಳಿಂದ ಆಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನ ರಾಜತಾಂತ್ರಿಕ ವಸತಿ ಗೃಹವನ್ನು ಸುತ್ತವರೆದಿದ್ದ ಉಗ್ರರನ್ನು ಭದ್ರತಾ ಪಡೆಗಳು ಬುಧವಾರ ತೆರವುಗೊಳಿಸಿದ್ದು, ನಾಲ್ವರು ಉಗ್ರರನ್ನು ಹತ್ಯೆ...

ಕಾಬುಲ್: ಎರಡು ದಿನಗಳಿಂದ ಆಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನ ರಾಜತಾಂತ್ರಿಕ ವಸತಿ ಗೃಹವನ್ನು ಸುತ್ತವರೆದಿದ್ದ ಉಗ್ರರನ್ನು ಭದ್ರತಾ ಪಡೆಗಳು ಬುಧವಾರ ತೆರವುಗೊಳಿಸಿದ್ದು, ನಾಲ್ವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ನಿನ್ನೆ ಇದ್ದಕ್ಕಿದ್ದಂತೆ ಮುಸುಕು ಧರಿಸಿದ್ದ ಉಗ್ರರು ಪೊಲೀಸ್ ಹಾಗೂ ಸೇನಾ ಪಡೆಯ ಅತಿಥಿಗೃಹದ ಒಳ ನುಗ್ಗಿ, ಅತಿಥಿ ಗೃಹವನ್ನು ಸುತ್ತುವರೆದಿದ್ದರು. ಕಾಂಪೌಂಡ್ ಸುತ್ತುವರೆದಿದ್ದ ಉಗ್ರರ ಬಳಿ ರಾಕೆಟ್ ಲಾಂಚರ್ ಮತ್ತು ಗ್ರೆನೇಡ್ ಗಳು ಸೇರಿದಂತೆ ಭಾರಿ ಪ್ರಮಾಣದ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿದ್ದವು ಎಂದು ಹೇಳಲಾಗುತ್ತಿತ್ತು.

ಉಗ್ರರ ದಾಳಿ ವಿರುದ್ಧ ಕಾರ್ಯಾಚರಣೆಗೆ ಮುಂದಾಗಿದ್ದ ಸೇನಾ ಪಡೆಗಳು ನಿರಂತರ ಎರಡುದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ದು, ಇಂದು ಬೆಳಿಗ್ಗೆ ಎಲ್ಲಾ ಉಗ್ರರನ್ನು ಹತ್ಯೆ ಮಾಡುವ ಮೂಲಕ ಉಗ್ರರಿಂದ ಸುತ್ತುವರೆದಿದ್ದ ಕಾಂಪೌಂಡನ್ನು ತೆರವುಗೊಳಿಸಿದ್ದಾರೆ. ದಾಳಿಯಲ್ಲಿ ಭದ್ರತಾ ಪಡೆಗಳಾಗಲಿ ಅಥವಾ ಸಾರ್ವಜನಿಕರಾಗಲಿ ಯಾರೂ ಹತರಾಗಿಲ್ಲ ಎಂದು ಮೂಲಗಳು ಸ್ಪಷ್ಪಪಡಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!