ಜವಹರ ಲಾಲ್ ನೆಹರೂ 
ದೇಶ

ಜವಹರಲಾಲ್ ನೆಹರೂ 51ನೇ ಪುಣ್ಯತಿಥಿ

ನಮ್ಮ ದೇಶದ ಪ್ರಥಮ ಪ್ರಧಾನಮಂತ್ರಿ ಜವಹರಲಾಲ ನೆಹರೂರವರ 51ನೇ ಪುಣ್ಯ ತಿಥಿ ದಿನವಾದ ಇಂದು(ಬುಧವಾರ) ದೇಶಾದ್ಯಂತ ಅವರನ್ನು ಸ್ಮರಿಸಲಾಗುತ್ತಿದೆ...

ನವದೆಹಲಿ:ನಮ್ಮ ದೇಶದ ಪ್ರಥಮ ಪ್ರಧಾನಮಂತ್ರಿ ಜವಹರಲಾಲ ನೆಹರೂರವರ 51ನೇ ಪುಣ್ಯ ತಿಥಿ ದಿನವಾದ ಬುಧವಾರ ದೇಶಾದ್ಯಂತ ಅವರನ್ನು ಸ್ಮರಿಸಲಾಗುತ್ತಿದೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ,ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೊದಲಾದ ನಾಯಕರು ಇಂದು ಬೆಳಗ್ಗೆ ಯಮುನಾ ನದಿ ತೀರದಲ್ಲಿರುವ ಶಾಂತಿ ವನಕ್ಕೆ ತೆರಳಿ  ನೆಹರೂರವರ ಸ್ಮಾರಕಕ್ಕೆ ಅಂತಿಮ ನಮನ ಸಲ್ಲಿಸಿದರು.

ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ನೆಹರೂ ಅವರು, ನಮ್ಮ ದೇಶದ ಮೊದಲ ಪ್ರಧಾನಮಂತ್ರಿಯಾಗಿ, ಸ್ವಾತಂತ್ಯ್ರ ಹೋರಾಟಗಾರರಾಗಿ ಎಂದಿಗೂ ನಮ್ಮ ಮನಸ್ಸಿನಲ್ಲಿ ಉಳಿಯುತ್ತಾರೆ ಎಂದು ಟ್ವೀಟಿಸಿದ್ದಾರೆ.

ನೆಹರೂ ಸ್ಮರಣಾರ್ಥ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಶಾಂತಿವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರು ಭಾಗವಹಿಸಿರಲಿಲ್ಲ.ಕಾಂಗ್ರೆಸ್ ನ ಹಿರಿಯ ಮುಖಂಡರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ನೆಹರೂರವರ ತತ್ವ, ಆದರ್ಶಗಳನ್ನು ಸಾರುವ ಹಾಗೂ ದೇಶಭಕ್ತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು,.

ನವೆಂಬರ್ 14,1889ರಲ್ಲಿ ಜನಿಸಿದ್ದ ನೆಹರೂರವರು, 20ನೇ ಶತಮಾನದಲ್ಲಿ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರು ಮೇ 27,1964ರಲ್ಲಿ ತಮ್ಮ 74ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT