ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಸಂತೈಸಿದ ಕ್ಷಣ 
ದೇಶ

ಮೋದಿಯನ್ನು ಭೇಟಿಯಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ಎನ್ ಡಿಎ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ ಕೆಲವು ಗಂಟೆಗಳ ಬಳಿಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ...

ನವದೆಹಲಿ: ಎನ್ ಡಿಎ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ ಕೆಲವು ಗಂಟೆಗಳ ಬಳಿಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮೋದಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸಿಂಗ್ ಅವರು ಆರ್ಥಿಕ ಹಾಗೂ ವಿದೇಶಾಂಗ ನೀತಿಗಳ ಕುರಿತಂತೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮೂಲಗಳ ಪ್ರಕಾರ ಆರ್ಥಿಕ ಮತ್ತು ವಿದೇಶಾಂಗ ನೀತಿಗಳ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಮಾಜಿ ಪ್ರಧಾನಿ ಸಿಂಗ್ ಅವರಿಗೆ ಆಹ್ವಾನ ನೀಡಿದ್ದರು. ಆದರೆ, ಈ ಆಹ್ವಾನವು ಮಂಗಳವಾರ ನಿಗದಿಯಾಗಿತ್ತು. ಕಾರಣಾಂತರಗಳಿಂದ ಸಿಂಗ್ ಅವರು ಭೇಟಿ ನೀಡಲು ಸಾಧ್ಯವಾಗಿಲ್ಲ. ಆದ್ದರಿಂದ ಆಹ್ವಾನವನ್ನು ಬುಧವಾರ ಸಂಜೆಗೆ ನಿಗದಿ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿರುವ ಕುರಿತಂತೆ ಸ್ವತಃ ನರೇಂದ್ರ ಮೋದಿ ಅವರೇ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದು, ಟ್ವೀಟ್ ನಲ್ಲಿ 7ಆರ್ ಸಿಆರ್ ಗೆ ಮರಳಿ ಭೇಟಿ ನೀಡಿರುವ ಮನಮೋಹನ್ ಸಿಂಗ್ ಅವರಿಗೆ ಸ್ವಾಗತ, ಸಿಂಗ್ ಅವರನ್ನು ಭೇಟಿ ಮಾಡಿದ್ದು ಹಾಗೂ ಅವರೊಡನೆ ಚರ್ಚೆ ನಡೆಸಿದ್ದು ಬಹಳ ಸಂತೋಷ ತಂದಿದೆ ಎಂದು ಹೇಳಿದ್ದಾರೆ.

ನಿನ್ನೆಯಷ್ಟೇ ತಮ್ಮ ವಿರುದ್ಧ ಕೇಳಿ ಬಂದ ಆರೋಪಗಳಿಗೆ ಮೊದಲ ಬಾರಿ ಮೌನ ಮುರಿದಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ, ಕೇಂದ್ರ ಎನ್ ಡಿಎ ಸರ್ಕಾರ ವಿರುದ್ಧ ವಾಗ್ಧಾಳಿ ನಡೆಸಿದ್ದರು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದಿಂದ ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳು ಬೆದರಿಕೆಯ ನೆರಳಿನಲ್ಲಿ ಕೆಲಸ ಮಾಡಬೇಕಿದೆ. ಬಿಜೆಪಿ ಸರ್ಕಾರವು ಭ್ರಷ್ಟಾರದಲ್ಲಿ ಮುಳುಗಿದ್ದು, ದೇಶದ ಜನತೆಯ ಗಮನ ಬೇರೆಡೆ ಸೆಳೆಯಲು ಅನಾವಶ್ಯಕ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತಿದೆ. ಯುಪಿಎ ಸರ್ಕಾರದ ಯೋಜನಗಳಿಗೆ ಮರುನಾಮಕರಣ ಮಾಡಿ ತಮ್ಮದೇ ಯೋಜನೆ ಎಂದು ಎನ್ ಡಿಎ ಸರ್ಕಾರ ತೋರ್ಪಡಿಸುಕೊಳ್ಳುತ್ತಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!