ಬಾಬಾ ರಾಮದೇವ್ 
ದೇಶ

ಫ‌ುಡ್ ಪಾರ್ಕ್‌ ಘರ್ಷಣೆ‌: ಬಾಬಾ ರಾಮದೇವ್ ಸಹೋದರ ರಾಮ್ ಭರತ್ ಬಂಧನ

ಪತಂಜಲಿ ಫ‌ುಡ್‌ & ಹರ್ಬಲ್‌ ಪಾರ್ಕ್‌ನಲ್ಲಿ ಬುಧವಾರ ನಡೆದ ಘರ್ಷಣೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್‌ದೇವ್‌ಗೆ ಅವರ...

ಹರಿದ್ವಾರ: ಪತಂಜಲಿ ಫ‌ುಡ್‌ & ಹರ್ಬಲ್‌ ಪಾರ್ಕ್‌ನಲ್ಲಿ ಬುಧವಾರ ನಡೆದ ಘರ್ಷಣೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್‌ದೇವ್‌ಗೆ ಅವರ ಸಹೋದರ ರಾಮ್ ಭರತ್‌ನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ವಿರುದ್ಧ ಐಪಿಸಿ ಸೆಕ್ಷನ್ 302 ಮತ್ತು 307ರ ಅಡಿಯಲ್ಲಿ  ಪ್ರಕರಣ ದಾಖಲಾಗಿದ್ದು, ಇತರ 40 ಮಂದಿಯ ವಿರುದ್ಧ ಸಹ ಪೊಲೀಸರು ಕೇಸ್  ದಾಖಲಿಸಿದ್ದಾರೆ.
 
ಸ್ಥಳೀಯ ಟ್ರಕ್‌ ಗಳಿಗೆ ಅವಕಾಶ ನೀಡದೆ ಹೊರಗಿನವರಿಗೆ ಕೆಲಸ ನೀಡುತ್ತಿದ್ದೀರಿ ಎಂದು ಟ್ರಕ್‌ ಮಾಲೀಕರು ಪತಂಜಲಿ ಸಂಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದರು. ಈ ವೇಳೆ
ಟ್ರಕ್‌ ಯೂನಿಯನ್‌ ಸದಸ್ಯರು ಮತ್ತು ಫ‌ುಡ್‌ ಪಾರ್ಕ್‌ನ ಭದ್ರತಾ ಸಿಬ್ಬಂದಿಗಳ ನಡುವೆ ಘರ್ಷಣೆಗೆ ಕಾರಣವಾಗಿತ್ತು. ಇದರಲ್ಲಿ  ಟ್ರಕ್‌ ಮಾಲೀಕ ದಲ್ಜೀತ್‌ ಸಿಂಗ್‌ ಎಂಬಾತ ಸಾವನ್ನಪ್ಪಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಪಥ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ