ಕೇಂದ್ರ ಸಚಿವ ರಾಜನಾಥ್ ಸಿಂಗ್ 
ದೇಶ

ದೆಹಲಿ ದರ್ಬಾರ್ ಆಸೆ ನಮಗಿಲ್ಲ: ರಾಜನಾಥ್ ಸಿಂಗ್

ದೆಹಲಿಯಲ್ಲಿ ಸರ್ಕಾರ ನಡೆಸಬೇಕು ಎಂಬ ಯಾವ ಉದ್ದೇಶವೂ ನಮಗಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ಸರ್ಕಾರ ನಡೆಸಬೇಕು ಎಂಬ ಯಾವ ಉದ್ದೇಶವೂ ನಮಗಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ರಾಜಧಾನಿ ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರದ ನಡುವಿನ ಸಾಂವಿಧಾನಿಕ ಬಿಕ್ಕಟ್ಟು ಮುಂದುವರೆದಿರುವಂತೆಯೇ, ನಾಯಕರ ವಾಕ್ಸಮರ ಮುಂದುವರೆದಿದ್ದು, ಯಾರೋ ಒಬ್ಬರ ಮೂಲಕ ದೆಹಲಿಯಲ್ಲಿ ಸರ್ಕಾರ ನಡೆಸುವ ಅಗತ್ಯ ನಮಗಿಲ್ಲ. ಸರ್ಕಾರ ಅವರದೇ. ಆದರೆ ಸಂವಿಧಾನವನ್ನು ಗಮನದಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸಬೇಕು ಎಂದು ರಾಜನಾಥ್ ಸಿಂಗ್ ಹೇಳಿದರು.

ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್ ಅವರು, "ನಾವು ಯಾರ ವಿರುದ್ಧವೂ ಅಲ್ಲ. ಅಥವಾ ಯಾರ ಪರವಾಗಿಯೂ ನಿಂತಿಲ್ಲ. ಆದರೆ ನಮಗೆ ನಮ್ಮದೇ ಆದ ಸಂವಿಧಾನಿಕ ಕಟ್ಟುಪಾಡುಗಳನ್ನು ಎತ್ತಿಹಿಡಿಯುವ ಜವಾಬ್ದಾರಿ ಇದೆ. ಎಲ್ಲ ಪ್ರಜಾ ಪ್ರತಿನಿಧಿಗಳೂ ಸಾಂವಿಧಾನಿಕ ಚೌಕಟ್ಟಿನಲ್ಲಿ ತಮ್ಮ ಕರ್ತವ್ಯ ನಿಭಾಯಿಸಬೇಕಿದೆ ಎಂದು ಹೇಳಿದರು.

ಇದೇ ವೇಳೆ ಮೇ 21ರಂದು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಹೆಚ್ಚುವರಿ ಅಧಿಕಾರ ನೀಡಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದು ದೇಶವನ್ನು ನರೇಂದ್ರ ಮೋದಿ ಅವರ ಸರ್ವಾಧಿಕಾರದತ್ತ ಕೊಂಡೊಯ್ಯುವ ಸೂಚನೆ ಎಂದು ಕೇಜ್ರಿವಾಲ್ ಅವರ ಹೇಳಿಕೆ ಕುರಿತು ವರದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜನಾಥ್ ಸಿಂಗ್ ಅವರು, "ನಾನು ಈ ಬಗ್ಗೆ ಹೆಚ್ಚೇನು ಮಾತನಾಡುವುದಿಲ್ಲ. ಆದರೆ ಕೇಂದ್ರ ಸರ್ಕಾರ ಸಂವಿಧಾನದ ಕಟ್ಟುಪಾಡುಗಳನ್ನು ಎತ್ತಿಹಿಡಿಯಬೇಕಿದೆ. ಕಾನೂನು ಮತ್ತು ಸುವ್ಯವಸ್ಥೆ ಕೂಡ ನಮ್ಮದೇ ಜವಾಬ್ದಾರಿ" ಎಂದಷ್ಟೇ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

ವಿಶ್ವದಾದ್ಯಂತ ಏಕಕಾಲಕ್ಕೆ 'ರಾಮಾಯಣ ಭಾಗ 1' ಬಿಡುಗಡೆ: ದಸರಾ ಹಬ್ಬದಿಂದಲೇ ಮುಂಗಡ ಬುಕಿಂಗ್‌ ಆರಂಭ!

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್