ಭಾರತ-ನೇಪಾಳ ಗಡಿಯಲ್ಲಿ ಪ್ರತಿಭಟನೆ: ಪೊಲೀಸರ ಗುಂಡಿಗೆ ಓರ್ವ ಭಾರತೀಯ ಸಾವು
ಭಾರತ-ನೇಪಾಳ ಗಡಿಯಲ್ಲಿ ಮಾದೇಸಿ ಸಮುದಾಯದ ಜನ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ಗುಂಡು ಹಾರಿಸಿದ ಪರಿಣಾಮ ಓರ್ವ ಭಾರತ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ...
ಬಿರ್ಗುಂಜ್: ಭಾರತ-ನೇಪಾಳ ಗಡಿಯಲ್ಲಿ ಮಾದೇಸಿ ಸಮುದಾಯದ ಜನ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ಗುಂಡು ಹಾರಿಸಿದ ಪರಿಣಾಮ ಓರ್ವ ಭಾರತೀಯ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ನೇಪಾಳ ಹೊಸ ಸಂವಿಧಾನವನ್ನು ವಿರೋಧಿಸಿದ್ದ ಮಾದೇಸಿ ಸಮುದಾಯದ ಜನರು ಭಾರತೀಯ ಮೂಲದ ಜನರ ಹಿತಕಾಯುವುದಾಗಿ ಹೇಳಿ ಭಾರತ-ನೇಪಾಳ ಗಡಿಯ ಪ್ರಮುಖ ವ್ಯಾಪಾರ ವಹಿವಾಟಿನ ಸರಕು ಸಾಗಣೆ ಮಾರ್ಗದ ಮೇಚಿ ಸೇತುವೆ ಬಳಿ ಸರಕು ಸಾಗಣೆ ವಾಹನಗಳ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದರು. ಇದರಿಂದಾಗಿ ನೇಪಾಳದಲ್ಲಿ ನಡೆಯುವ ಪ್ರಮುಖ ವ್ಯಾಪಾರ ಚಟುವಟಿಕೆಗಳಿಗೆ ತೊಂದರೆಯಾಗಿತ್ತು.
ಹೀಗಾಗಿ ಪ್ರತಿಭಟನಾಕಾರರನ್ನು ತೆರವುಗೊಳಿಸಲು ಪೊಲೀಸರು ಮುಂದಾದಾಗ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ನಂತರ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಗುಂಡಿನ ದಾಳಿ ನಡೆಸಿದ್ದರು ಎಂದು ಹೇಳಲಾಗುತ್ತಿದೆ.
ಪೊಲೀಸರ ಗುಂಡಿಗೆ ತೀವ್ರವಾಗಿ ಗಾಯಗೊಂಡಿದ್ದ ಓರ್ವ ಭಾರತೀಯನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆಂದು ಹೇಳಲಾಗುತ್ತಿದೆ. ಘಟನೆಯಲ್ಲಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.