ನವದೆಹಲಿ: ಇಂಡೋನೇಶಿಯಾದ ಬಾಲಿಯಲ್ಲಿ ಛೋಟಾ ರಾಜನ್ ಬಂಧನದ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿರುವ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಭದ್ರತೆ ಹೆಚ್ಚಿಸಲಾಗಿದೆ.
1993ರ ಮುಂಬಯಿ ಸರಣಿ ಸ್ಫೋಟದ ನಂತರ ಭಾರತದಿಂದ ಪರಾರಿಯಾಗಿರುವ ದಾವೂದ್, ಸುಮಾರು 2 ದಶಕಗಳಿಂದ ಪಾಕಿಸ್ತಾನದಲ್ಲಿ ಅಡಗಿಕುಳಿತಿದ್ದಾನೆ. ಇಸ್ಲಮಾಬಾದ್ ಮತ್ತು ಕರಾಚಿಯಲ್ಲಿರುವ ದಾವೂದ್ ನಿವಾಸಗಳಿಗೆ ಪಾಕಿಸ್ತಾನ ಭದ್ರತೆಗಾಗಿ ವಿಶೇಷ ಕಮಾಂಡೋಗಳನ್ನು ನಿಯೋಜಿಸಿದ್ದಾರೆ ಎಂದು ಗುಪ್ತಚರ ಇಲಾಖೆ ವರದಿ ಮಾಡಿದೆ.
ಇನ್ನು ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದಾನೆ ಎಂದು ಬಂಧಿತ ಛೋಟಾ ರಾಜನ್ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ಇಲ್ಲ ಎಂದು ಪಾಕಿಸ್ತಾನ ವಾದ ಮಾಡುತ್ತಿದೆ. ಗೃಹ ಸಚಿವ ರಾಜನಾಥ್ ಸಿಂಗ್ ದಾವೂದ್ ಪಾಕಿಸ್ತಾನದಲ್ಲೇ ಇದ್ದಾನೆ. ಆದರೆ ಆ ದೇಶದೊಳಗಿದ್ದುಕೊಂಡೇ ಪದೇ ಪದೇ ವಾಸ್ತವ್ಯ ಬದಲಿಸುತ್ತಿದ್ದಾನೆ ಎಂದು ಹೇಳಿದ್ದಾರೆ.