ಸಾಂದರ್ಭಿಕ ಚಿತ್ರ 
ದೇಶ

ಪ್ರವಾಸ ಮುಗಿಸಿ ಬರದಿದ್ರೆ ಕೆಲಸಕ್ಕೆ ಕುತ್ತು: ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಎಚ್ಚರಿಕೆ

ಐಎಎಸ್, ಐಪಿಎಸ್ ಅಧಿಕಾರಿಗಳು ವಿದೇಶ ಪ್ರವಾಸ ಕೈಗೊಂಡು, ಅವಧಿಗಿಂತ ಹೆಚ್ಚು ಕಾಲ ತಂಗಿದರೆ ಅಥವಾ ಅನುಮತಿ ಇಲ್ಲದೆ...

ನವದೆಹಲಿ: ಐಎಎಸ್, ಐಪಿಎಸ್ ಅಧಿಕಾರಿಗಳು ವಿದೇಶ ಪ್ರವಾಸ ಕೈಗೊಂಡು, ಅವಧಿಗಿಂತ ಹೆಚ್ಚು ಕಾಲ ತಂಗಿದರೆ ಅಥವಾ ಅನುಮತಿ ಇಲ್ಲದೆ ರಜೆಯಲ್ಲಿ ತೆರಳಿದರೆ ಅವರ ಉದ್ಯೋಗಕ್ಕೇ ಕುತ್ತು ಬಂದೀತು. ಕೇಂದ್ರ ಸರ್ಕಾರ ಈ ಬಗ್ಗೆ ಹೊಸತಾಗಿ ನಿಯಮಗಳನ್ನು ಪರಿಷ್ಕರಿಸಿ ಮಂಗಳವಾರ ಆದೇಶ ಹೊರಡಿಸಿದೆ. 
ಕೆಲವು ಅಧಿಕಾರಿಗಳು ನಿಯಮ ಮೀರಿ ತಂಗಿದ್ದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂಥ ನಿಯಮ ಅನುಷ್ಠಾನಕ್ಕೆ ತರಲು ಮುಂದಾಗಿದೆ. ಈಗಾಗಲೇ 10 ಮಂದಿ ಐಎಎಸ್ ಅಧಿಕಾರಿಗಳ ವಿರುದ್ಧ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ದೂರು ಸಲ್ಲಿಕೆಯಾಗಿದೆ. 
ರಾಜ್ಯ ಸರ್ಕಾರಗಳ ಮಟ್ಟದಲ್ಲಿ ಐಎಎಸ್, ಐಪಿಎಸ್, ಭಾರತೀಯ ಅರಣ್ಯ ಸೇವಾ ಅಧಿಕಾರಿಗಳ ಕ್ರಮ ಕೈಗೊಳ್ಳಲು ಅಸಾಧ್ಯವಾದರೆ, ಕೇಂದ್ರ ಸರ್ಕಾರವೇ ಪರಿಗಣಿತ ರಾಜಿ ನಾಮೆ (ಡೀಮ್ಡ್ ರೆಸಿಗ್ನೇಷನ್)ಕೇಳುವ ಅವಕಾಶ ಹೊಸ ನಿಯಮಾವಳಿಯಲ್ಲಿದೆ. 
ರಾಜ್ಯ ಸರ್ಕಾರಗಳ ಮಟ್ಟದಲ್ಲಿ ಕೂಡ ಎಎಸ್, ಐಪಿಎಸ್ ಮತ್ತು ಭಾರತೀಯ ಅರಣ್ಯ ಸೇವಾ ಅಧಿಕಾರಿಗಳು ವಿದೇಶಗಳಲ್ಲಿ ಅಥವಾ ಅನುಮತಿ ಪಡೆದು ಅಧ್ಯಯನ ಮತ್ತು ಇತರ ಅಧಿಕೃತ ಕಾರ್ಯಕ್ರಮಗಳ ಬಳಿಕ ಕರ್ತವ್ಯಕ್ಕೆ ಹಾಜರಾಗದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. 
ಒಂದು ತಿಂಗಳ ಕಾಲ ಪ್ರತಿಕ್ರಿಯೆ ನಿರೀಕ್ಷಿಸಿ ಆ ಬಳಿಕ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ನಿಯಮದಲ್ಲಿ ಉಲ್ಲೇಖಿಸಲಾಗಿದೆ. ಯಾವ ರಾಜ್ಯದ ಕೇಡರ್‍ಗೆ ಅಧಿಕಾರಿ ಸೇರಿರುತ್ತಾನೆ. ಅದರ ಮೂಲಕ ಆತನಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್