ಅನುಪಮ್ ಖೇರ್ 
ದೇಶ

ಅಸಹಿಷ್ಣುತೆಯ ದೇಶ ಎಂದು ಕರೆಯುವ ಹಕ್ಕು ಯಾರಿಗೂ ಇಲ್ಲ: ಅನುಪಮ್ ಖೇರ್

ದೇಶದಲ್ಲಿ ಅಸಹಿಷ್ಣುತೆ ಇದೆ ಎಂದು ಪ್ರತಿಭಟನೆ ಮಾಡುತ್ತಿರುವವರ ವಿರುದ್ಧ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಶನಿವಾರ ದೆಹಲಿಯಲ್ಲಿ...

ನವದೆಹಲಿ: ದೇಶದಲ್ಲಿ ಅಸಹಿಷ್ಣುತೆ ಇದೆ ಎಂದು ಪ್ರತಿಭಟನೆ ಮಾಡುತ್ತಿರುವವರ ವಿರುದ್ಧ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಶನಿವಾರ ದೆಹಲಿಯಲ್ಲಿ ಪರ್ಯಾಯ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಷ್ಟ್ರ ಪ್ರಶಸ್ತಿಗಳನ್ನು ವಾಪಸ್ ನೀಡುತ್ತಿರುವವರ ವಿರುದ್ಧ ಇಂದು ಬೆಳಗ್ಗೆ ಇಂಡಿಯಾ ಗೇಟ್‌ನಿಂದ ರಾಷ್ಟ್ರಪತಿ ಭವನದವರೆಗೆ 'ಮಾರ್ಚ್ ಫಾರ್ ಇಂಡಿಯಾ' ಮೆರವಣಿಗೆ ನಡೆಸುತ್ತಿದ್ದಾರೆ. ಅನುಪಮ್ ಖೇರ್ ಅವರಿಗೆ ಮಧುರ್ ಭಂಡಾರ್ಕರ್ ಸೇರಿದಂತೆ ಬಾಲಿವುಡ್‌ನ ಹಲವು ನಿರ್ದೇಶಕರು ಹಾಗೂ ನಟರು ಸಾಥ್ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅನುಪಮ್ ಖೇರ್, 'ದೇಶದಲ್ಲಿ ಸಾಕಷ್ಟು ಸಹಿಷ್ಣುತೆ ಇದೆ. ಪ್ರತಿ ದೇಶದಲ್ಲೂ ಒಳ ಸಮಸ್ಯೆಗಳು ಇದ್ದೇ ಇರುತ್ತವೆ. ಹಾಗಂತ ಅದನ್ನು ಅಸಹಿಷ್ಟುತೆಯ ದೇಶ ಎಂದು ಕರೆಯಲು ಬರುವುದಿಲ್ಲ' ಎಂದಿದ್ದಾರೆ.

ಭಾರತ ಅಸಹಿಷ್ಟುತೆಯೆ ದೇಶ ಎಂದು ಕರೆಯುವ ಹಕ್ಕು ಯಾರಿಗೂ ಇಲ್ಲ ಮತ್ತು  ಅಸಹಿಷ್ಟುತೆ ಹೋರಾಟಗಾರರು ದೇಶ ವಿರೋಧಿಗಳು ಎಂದು ಬಾಲಿವುಡ್ ನಟ ಹೇಳಿದ್ದಾರೆ.

ಪ್ರತಿಭಟನೆಗೆ ಕರೆ ನೀಡುವುದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಅನುಪಮ್ ಖೇರ್, ಕೆಲವು ಸಾಹಿತಿಗಳು ಪ್ರಶಸ್ತಿ ಹಿಂತಿರುಗಿಸುತ್ತಿರುವುದರಿಂದ ಸರ್ಕಾರಕ್ಕೆ ಮುಖಭಂಗವಾಗಿಲ್ಲ. ಬದಲಾಗಿ ಪ್ರಶಸ್ತಿ ನೀಡಿದ್ದ ತೀರ್ಪುಗಾರರಿಗೆ ಮುಖಭಂಗವಾಗಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT