ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿರುವ ಜೆಡಿಯು ನಾಯಕ ನಿತೀಶ್ ಕುಮಾರ್ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಭಿನಂದಿಸಿದ್ದಾರೆ.
ನಿಮ್ಮ ಐತಿಹಾಸಿಕ ಗೆಲುವಿಗೆ ಮನಃ ಪೂರ್ಣ ಅಭಿನಂದನೆಗಳು ಎಂದು ಅರವಿಂದ್ ಕೇಜ್ರಿವಾಲ್ ಅವರು ನಿತೀಶ್ ಅವರಿಗೆ ಟ್ವೀಟ್ ಮಾಡಿದ್ದಾರೆ.
ನಿತೀಶ್ ಜಿ ಅವರನ್ನು ಮತ್ತೆ ಮುಖ್ಯಮಂತ್ರಿಯಾಗಿಸಲು ಮತ ನೀಡಿ ಎಂದು ಬಿಹಾರದ ಸಹೋದರ- ಸಹೋದರಿಯರಲ್ಲಿ ನಾನು ಮನವಿ ಮಾಡುತ್ತೇನೆ ಎಂದು ಚುನಾವಣೆ ಪ್ರಚಾರದ ವೇಳೆ ಅರವಿಂದ್ ಕೇಜ್ರಿವಾಲ್ ಅವರು ಟ್ವಿಟರ್ ಮೂಲಕ ನಿತೀಶ್ ಪರ ಮತಯಾಚಿಸಿದ್ದರು.