ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಬಿಹಾರ ಚುನಾವಣಾ ಗೆಲುವು: ನಿತೀಶ್ ಗೆ ಒಮರ್ ಅಬ್ದುಲ್ಲಾ ಅಭಿನಂದನೆ

ಬಿಹಾರ ವಿಧಾನಸಭಾ ಚುನಾವಣಾ ಗೆಲುವು ಹಿನ್ನಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಅಭಿನಂದನೆ ಸಲ್ಲಿಸಿದ್ದಾರೆ...

ಒಮರ್ ಅಬ್ದುಲ್ಲಾ ಮತ್ತು ನಿತೀಶ್ ಕುಮಾರ್ (ಸಂಗ್ರಹ ಚಿತ್ರ)
Srinivasa Murthy VN
Updated On : 8 Nov 2015, 3:05 am

ಶ್ರೀನಗರ: ಬಿಹಾರ ವಿಧಾನಸಭಾ ಚುನಾವಣಾ ಗೆಲುವು ಹಿನ್ನಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಅಭಿನಂದನೆ  ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಬ್ದುಲ್ಲಾ ಅವರು, ಚುನಾವಣಾ ಗೆಲುವಿಗಾಗಿ ಅಭಿನಂದನೆ ಮತ್ತು ತಮಗೆ ಅರ್ಹ ಗೆಲುವು ಸಂದಿದೆ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಪ್ರಧಾನಿ ಮೋದಿ ಅವರನ್ನು  ಉದ್ದೇಶಿಸಿ ನಿಮ್ಮ ಗೆಲುವು ದೇಶದ ಭವಿಷ್ಯದಲ್ಲಿ ಕಠಿಣ ದಿನಗಳ ಬರಲಿವೆ ಎಂಬ ಸಂದೇಶವನ್ನು ಸಾರಿದೆ ಎಂದು ಹೇಳಿದ್ದಾರೆ.

5 ಹಂತಗಳಲ್ಲಿ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಮಹಾಘಟ್ ಬಂಧನ ಮೈತ್ರೀಕೂಟ ಒಟ್ಟು 173 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ  ಬಿಹಾರದಲ್ಲಿ ಮತ್ತೆ ಅಧಿಕಾರದತ್ತ ದಾಪುಗಾಲಿಟ್ಟಿದೆ. ಜೆಡಿಯು ಮೈತ್ರೀಕೂಟಕ್ಕೆ ತೀವ್ರ ಪೈಪೋಟಿ ನೀಡಲಿದೆ ಎಂದು ಹೇಳಲಾಗುತ್ತಿದ್ದ ಬಿಜೆಪಿ ಮೈತ್ರಿಕೂಟ ಕೇವಲ 63 ಸ್ಥಾನಗಳಲ್ಲಿ ಮಾತ್ರ ಮುನ್ನಡೆ  ಪಡೆದುಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments