ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿರುವ ಜೆಡಿಯು ನಾಯಕ ನಿತೀಶ್ ಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ನಿತೀಶ್ ಕುಮಾರ್ ಅವರಿಗೆ ಅಭಿನಂದಿಸಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಲ್ಲದೇ, ನಿತೀಶ್ ಅವರಿಗೆ ಖುದ್ದಾಗಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಹಾ ಮೈತ್ರಿ ಪರಿಣಾಮವಾಗಿ ಬಿಜೆಪಿ ಚುನಾವಣೆಯಲ್ಲಿ ಸೋಲು ಕಂಡಿದೆ ಎಂದು ಕೇಂದ್ರ ಸಚಿವ ಪ್ರಕಾಶ ಜಾವಡೆಕರ್ ಹೇಳಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಜನತಾದಳ (ಯು) ಮಹಾಮೈತ್ರಿಕೂಟ ಬಹುಮತ ಸಾಧಿಸುವತ್ತ ಮುಂದುವರೆದಿದೆ.