ಬಿಹಾರ ಗೆಲುವಿನ ಜೊತೆ ಲಾಲೂ ಪುತ್ರನ ಬರ್ತ್ ಡೇ ಸಂಭ್ರಮ
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮಹಾಮೈತ್ರಿ ಗೆಲುವಿನ ನಗೆ ಬೀರಿದೆ. ಇದರ ಜೊತೆಗೆ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪುತ್ರ ತಮ್ಮ 26ನೇ...
ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮಹಾಮೈತ್ರಿ ಗೆಲುವಿನ ನಗೆ ಬೀರಿದೆ. ಇದರ ಜೊತೆಗೆ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪುತ್ರ ತಮ್ಮ 26ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಬಿಹಾರ ಜನತೆ ನನ್ನ ಹುಟ್ಟು ಹಬ್ಬಕ್ಕೆ ಗೆಲುವಿನ ಉಡುಗೊರೆ ನೀಡಿದ್ದಾರೆ ಎಂದು ಲಾಲೂ ಪ್ರಸಾದ್ ಪುತ್ರ ತೇಜಸ್ವಿ ಹೇಳಿದ್ದಾರೆ. ಲಾಲೂ ಪುತ್ರರಾದ ತೇಜಸ್ವಿ ಮತ್ತು ತೇಜಪ್ರತಾಪ್ ರಾಘೋಪುರ್ ಮತ್ತು ಮಾಹುವಾ ವಿಧಾನಸಭೆ ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದಾರೆ.
ಇನ್ನು ಬಿಹಾರವನ್ನು ಅಭಿವೃದ್ಧಿಗೊಳಿಸುವುದು ತಮ್ಮ ಪ್ರಮುಖ ಆದ್ಯತೆ. ಬಿಹಾರವನ್ನು ಅಭಿವೃದ್ಧಿಗೊಳಿಸಿ ಒಂದು ಮಾದರಿ ರಾಜ್ಯವನ್ನಾಗಿ ಮಾಡುವುದಾಗಿ ತೇಜಸ್ವಿ ಯಾದವ್ ಹೇಳಿದ್ದಾರೆ.
ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿದ ತೇಜಸ್ವಿ ಯಾದವ್ ಸಿಹಿ ಹಂಚಿ ಸಂಭ್ರಮಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.