ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಹೀನಾಯ ಸೋಲಿಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರಣ ಎಂದು ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಎಚ್‌ಎಎಂ ಅಧ್ಯಕ್ಷ ಜಿತನ್ ರಾಮ್ ಮಾಂಝಿ ಅವರು ದೂರಿದ್ದಾರೆ.
ಮೀಸಲಾತಿಯನ್ನು ಪರಿಶೀಲಿಸಬೇಕು ಎಂಬ ಭಾಗವತ್ ಹೇಳಿಕೆಯನ್ನು ಮಹಾಮೈತ್ರಿಕೂಟದ ಪಕ್ಷಗಳು ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಂಡವು ಎಂದು ಮಾಂಝಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಬಿಹಾರದಲ್ಲಿ ಬಿಜೆಪಿ ಸೋತರೆ ಪಾಕಿಸ್ತಾನದಲ್ಲಿ ಪಟಾಕಿ ಹೊಡೆಯುತ್ತಾರೆ ಎಂಬ ಅಮಿತ್ ಶಾ ಅವರ ಹೇಳಿಕೆ ಎನ್‌ಡಿಎ ಸೋಲಿಗೆ ಪ್ರಮುಖ ಕಾರಣ ಎಂದು ಬಿಹಾರ ಮಾಜಿ ಸಿಎಂ ಅಭಿಪ್ರಾಯಪಟ್ಟಿದ್ದಾರೆ.
ಮಾಂಝಿ ಅವರ ಎಚ್‌ಎಎಂ ಪಕ್ಷ 20 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಆದರೆ ಗೆದ್ದಿದ್ದು ಮಾತ್ರ ಅವರೊಬ್ಬರೇ.