ಚಿತ್ತೂರು: ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ತೆರಳುತ್ತಿದ್ದ ಬೆಂಗಳೂರು ಮೂಲದ ದಿವಾಕರ್ ಎಂಬುವರ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚಿತ್ತೂರಿನಲ್ಲಿ ನಡೆದಿದೆ.
ವೈಕುಂಟನಾಥನ ದರ್ಶನಕ್ಕಾಗಿ ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ವೇಳೆ ಆಂಧ್ರದ ಚಿತ್ತೂರಿನಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ದಿವಾಕರ್, ಶಿಲ್ಪಾ ಹಾಗೂ 6 ವರ್ಷದ ನಾರ್ವಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 9 ವರ್ಷದ ನೋಹಿತ್ ಗೆ ಗಂಭೀರ ಗಾಯಗಳಾಗಿದ್ದು, ತಿರುಪತಿಯ ರೋಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.