ನವದೆಹಲಿ: ದೀಪಗಳ ಹಬ್ಬ ದೀಪಾವಳಿ ಹಬ್ಬದ ಪ್ರಯುಕ್ತ ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮಾ ಅವರು ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿ ಶುಭಾಶಯ ಕೋರಿದ್ದಾರೆ.
ಟರ್ಕಿಯಲ್ಲಿ ನಡೆಯುವ ಜಿ20 ಶೃಂಗಸಭೆ ಪ್ರಯುಕ್ತ ಉಭಯ ದೇಶದ ಮುಖಂಡರು ಸೇರಲಿದ್ದು, ಈ ಮಧ್ಯೆ ಪ್ರಧಾನಿ ಮೋದಿ ಅವರಿಗೆ ದೂರವಾಣಿ ಕರೆ ಮಾಡಿರುವ ಒಬಾಮಾ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.