ಸಾಂದರ್ಭಿಕ ಚಿತ್ರ 
ದೇಶ

ಮಳೆಗೆ ತಮಿಳುನಾಡಿನಲ್ಲಿ 19 ಬಲಿ

ತಮಿಳುನಾಡಿನಲ್ಲಿ ಕಳೆದೆರಡು ದಿನಗಳಿಂದ ಪ್ರವಾಹ ಸೇರಿದಂತೆ ಮಳೆ ಸಂಬಂಧಿತ ಘಟನೆಗಳಲ್ಲಿ 19 ಜನರು ಮೃತಪಟ್ಟಿದ್ದಾರೆ....

ಚೆನ್ನೈ: ತಮಿಳುನಾಡಿನಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ಜನ ತತ್ತರಿಸಿದ್ದಾರೆ. ಕಳೆದೆರಡು ದಿನಗಳಿಂದ ಪ್ರವಾಹ ಸೇರಿದಂತೆ ಮಳೆ ಸಂಬಂಧಿತ ಘಟನೆಗಳಲ್ಲಿ 19 ಜನರು ಮೃತಪಟ್ಟಿದ್ದಾರೆ.

ಇನ್ನು ಮಳೆಯಿಂದ ಸಾವಿಗೀಡಾಗಿರುವ 19 ಜನರ ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಜೆ.ಜಯಲಲಿತಾ, ಮೃತ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಿದ್ದಾರೆ. ತಮಿಳುನಾಡು ಸರ್ಕಾರವು 76 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಮೃತರ ಕುಟುಂಬಗಳಿಗೆ ವಿಪತ್ತು ಪರಿಹಾರ ನಿಧಿಯಿಂದ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಸತ್ತ 19 ಜನರಲ್ಲಿ 16 ಜನರು ಕಡಲೂರಿನಲ್ಲಿಯೇ ಮೃತಪಟ್ಟಿದ್ದಾರೆ. 16 ಜನರ ಪೈಕಿ 15 ಜನರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಮತ್ತೊಬ್ಬರು ಗೋಡೆ ಕುಸಿತ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!