ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನಾಳೆಯಿಂದ 3 ದಿನಗಳ ಕಾಲ ಬ್ರಿಟನ್ ಪ್ರವಾಸ ಕೈಗೊಳ್ಳಲಿರುವ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ನಾಳೆಯಿಂದ ಮೂರು ದಿನಗಳ ಕಾಲ ಬ್ರಿಟನ್ ಪ್ರವಾಸ ಕೈಗೊಳ್ಳಲಿದ್ದು, ಈ ಬಾರಿ ದೀಪಾವಳಿಯನ್ನು ಲಂಡನ್ ಭಾರತೀಯರ ಜತೆ...

ನರೇಂದ್ರ ಮೋದಿ
Vishwanath S
Updated On : 11 Nov 2015, 3:04 am
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆಯಿಂದ ಮೂರು ದಿನಗಳ ಕಾಲ ಬ್ರಿಟನ್ ಪ್ರವಾಸ ಕೈಗೊಳ್ಳಲಿದ್ದು, ಈ ಬಾರಿ ದೀಪಾವಳಿಯನ್ನು ಲಂಡನ್ ಭಾರತೀಯರ ಜತೆ ಆಚರಿಸಲಿದ್ದಾರೆ. 
ನಾಳೆ ಬ್ರಿಟನ್​ಗೆ ತೆರಳಲಿರುವ ಮೋದಿ ಜಂಟಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಳಿಕ ಬ್ರಿಟನ್ ಸಂಸದರು, ಸ್ವೀಕರ್ ಜತೆ ಮಾತುಕತೆ ನಡೆಸಲಿದ್ದು, ಪ್ರಧಾನಿ ಡೇವಿಡ್ ಕೆಮರೂನ್ ಜತೆ ಚರ್ಚೆ ನಡೆಸಲಿದ್ದಾರೆ. ಮೋದಿ ಅವರಿಗೆ ಒಲಿಂಪಿಕ್ಸ್ ಮಾದರಿಯಲ್ಲಿ ಅದ್ದೂರಿ ಸ್ವಾಗತ ನೀಡಲು ಲಂಡನ್ ನಲ್ಲಿ ಭರದ ತಯಾರಿ ನಡೆದಿದೆ.
ನವೆಂಬರ್ 13ರಂದು ಟಾಟಾ ಮೋಟಾರ್ಸ್ ಮಾಲೀಕತ್ವದ ಜಾಗ್ವಾರ್, ಲ್ಯಾಂಡ್ ರೋವರ್ ಕಾರು ತಯಾರಿಕಾ ಕಂಪನಿಗೆ ಭೇಟಿ ನೀಡಲಿದ್ದಾರೆ. ಸಂಜೆ ವೆಂಬ್ಲೆ ಸ್ಲೇಡಿಯಂನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. 

Advertisement

Advertisement

ನವೆಂಬರ್ 14ರಂದು ಥೇಮ್ಸ್ ನದಿ ತಟದಲ್ಲಿ ಸ್ಥಾಪಿಸಿರುವ ಮಹಾ ಮಾನವತಾವಾದಿ ಜಗಜ್ಯೋತಿ ಬಸವೇಶ್ವರ ಪ್ರತಿಮೆಯನ್ನು ಮೋದಿ ಅನಾವರಣಗೊಳಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments