ಸುನಂದಾ ಪುಷ್ಕರ್ (ಸಂಗ್ರಹ ಚಿತ್ರ) 
ದೇಶ

ವಿಷ ಪ್ರಾಷನದಿಂದ ಸುನಂದಾ ಪುಷ್ಕರ್ ಸಾವನ್ನಪ್ಪಿಲ್ಲ: ಎಫ್ ಬಿಐ ವರದಿ

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆಯ ಮಾಡಿ ಸಹಾಯಕ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ವಿಷ ಪ್ರಾಷನದಿಂದ ಸಾವನ್ನಪ್ಪಿಲ್ಲ ಎಂದು ಅಧಿಕಾರಿಗಳಿಗೆ ಎಫ್ ಬಿಐ ಬುಧವಾರ ತಿಳಿಸಿದೆ...

ನವದೆಹಲಿ: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆಯ ಮಾಡಿ ಸಹಾಯಕ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ವಿಷ ಪ್ರಾಷನದಿಂದ ಸಾವನ್ನಪ್ಪಿಲ್ಲ ಎಂದು ಅಧಿಕಾರಿಗಳಿಗೆ ಎಫ್ ಬಿಐ ಬುಧವಾರ ತಿಳಿಸಿದೆ

ನಿಗೂಢವಾಗಿ ಸಾವನ್ನಪ್ಪಿದ್ದ ಸುನಂದಾ ಪುಷ್ಕರ್ ಅವರ ಸಾವಿನ ಸುತ್ತ ಹಲವು ಅನುಮಾನಗಳು ಮೂಡಿದ್ದವು. ಇದರಂತೆ ಈ ಹಿಂದೆ ಸುನಂದಾ ದೇಹದಲ್ಲಿ ರೇಡಿಯಾಕ್ಟಿವ್ ಎಂಬ ವಿಷಕಾರಿ ಅಂಶ ಪತ್ತೆಯಾಗಿದ್ದು, ಈ ವಿಷಕಾರಿ ಅಂಶವೇ ಸುನಂದಾ ಸಾವಿಗೆ ಕಾರಣ ಎಂದು ಹೇಳಲಾಗುತ್ತಿತ್ತು. ಆದರೆ, ಈ ವಿಷಕಾರಿ ಅಂಶಗಳನ್ನು ಅಧ್ಯಯನ ಮಾಡಲು ಭಾರತೀಯ ಪ್ರಯೋಗಾಲಯದಲ್ಲಿ ಸೌಲಭ್ಯಗಳಿಲ್ಲ ಎಂದು ಹೇಳಿದ್ದ ಅಧಿಕಾರಿಗಳು ಅಧ್ಯಯನ ನಡೆಸಲು ಮಾದರಿಯನ್ನು ಎಫ್ ಬಿಐ ಪ್ರಯೋಗಾಲಯಕ್ಕೆ ಕಳುಹಿಸಿತ್ತು.

ಇದರಂತೆ ಸುನಂದಾ ಸಾವಿನ ಕುರಿತ ವರದಿಯನ್ನು ಇಂದು ಎಫ್ ಬಿಐ ಪ್ರಯೋಗಾಲಯವು ಅಧಿಕಾರಿಗಳಿಗೆ ಸಲ್ಲಿಸಿದ್ದು, ವರದಿಯಲ್ಲಿ ಸುನಂದಾ ಸಾವಿಗೆ ವಿಕಿರಣಗಳ ವಿಷ ಕಾರಣವಲ್ಲ. ದೇಹದಲ್ಲಿ ಪತ್ತೆಯಾದ ವಿಷವು ಸಾವನ್ನುಂಟು ಮಾಡುವಷ್ಟು ವಿಷಕಾರಿಯಾಗಿಲ್ಲ ಎಂದು ಹೇಳಿದೆ.

ಈ ಕುರಿತಂತೆ ಖಾಸಗಿ ಮಾಧ್ಯಮವೊಂದರಲ್ಲಿ ಮಾತನಾಡಿರುವ ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿ ಅವರು, ಸುನಂದಾ ಸಾವಿಗೆ ಕಾರಣವಾಗಿರುವ ಪ್ರಮುಖ ಅಂಶಗಳನ್ನು ಶೀಘ್ರದಲ್ಲೇ ಬಹಿರಂಗ ಪಡಿಸಲಾಗುವುದು. ಇದೀಗ ಎಫ್ ಬಿಐ ಸಲ್ಲಿಸಿರುವ ವರದಿಯಲ್ಲಿ ಸುನಂದಾ ಸಾವಿಗೆ ರೇಡಿಯಾಕ್ಟಿವ್ ವಿಷಕಾರಿ ಅಂಶ ಕಾರಣವಲ್ಲ ಎಂದು ವರದಿಯಲ್ಲಿ ತಿಳಿಸಿದೆ ಎಂದು ಹೇಳಿದ್ದಾರೆ.

2014ರ ಜನವರಿ 17 ರಂದು ದೆಹಲಿಯ ಪಂಚತಾರಾ ಹೋಟೆಲ್ ನಲ್ಲಿ ಸುನಂದಾ ಪುಷ್ಕರ್ ಅವರ ಮೃತ ದೇಹ ಪತ್ತೆಯಾಗಿತ್ತು. ಈ ಸಾವು ಸಾಕಷ್ಟು ಅನುಮಾನಕ್ಕೆ ದಾರಿ ಮಾಡಿಕೊಟ್ಟಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT