ಸುನಂದಾ ಪುಷ್ಕರ್ 
ದೇಶ

ಸುನಂದಾ ಸಾವು: ಕೋರ್ಟ್‌ಗೆ ಸಲ್ಲಿಸುವ ಮುನ್ನ ಎಫ್‌ಬಿಐ ವರದಿ ಬಹಿರಂಗಪಡಿಸಲ್ಲ; ಪೊಲೀಸ್

ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಬಿಐ ನೀಡಿರುವ ವರದಿಯನ್ನು ಕೋರ್ಟ್‌ಗೆ...

ನವದೆಹಲಿ: ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಬಿಐ ನೀಡಿರುವ ವರದಿಯನ್ನು ಕೋರ್ಟ್‌ಗೆ ಸಲ್ಲಿಸುವ ಮುನ್ನ ವರದಿಯ ವಿವರ ನೀಡುವುದಿಲ್ಲ ಎಂದು ಗುರುವಾರ ದೆಹಲಿ ಪೊಲೀಸರು ತಿಳಿಸಿದ್ದಾರೆ.

ವರದಿ ಕೋರ್ಟ್‌ಗೆ ಸಲ್ಲಿಸುವ ಮುನ್ನ ಸಾರ್ವಜನಿಕವಾಗಿ ಬಹಿರಂಗಪಡಿಸಲು ಬರುವುದಿಲ್ಲ ಎಂದು ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್. ಬಸ್ಸಿ ಅವರು ಹೇಳಿದ್ದಾರೆ.

ವರದಿ ಪರಿಶೀಲನೆಗೆ ಸಾಕಷ್ಟು ಸಮಯ ಬೇಕು ಮತ್ತು ಕೋರ್ಟ್‌ಗೆ ಸಲ್ಲಿಸಿದ ನಂತರವೂ ಕೆಲವು ಕಾನೂನು ಪ್ರಕ್ರಿಯೆಗಳು ಮುಗಿದ ನಂತರವೇ ವರದಿಯ ವಿವರ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸುನಂದಾ ಪುಷ್ಕರ್ ಅವರ ಸಾವಿನ ಸುತ್ತ ಹಲವು ಅನುಮಾನಗಳು ಮೂಡಿದ್ದವು. ಇದರಂತೆ ಈ ಹಿಂದೆ ಸುನಂದಾ ದೇಹದಲ್ಲಿ ರೇಡಿಯಾಕ್ಟಿವ್ ಎಂಬ ವಿಷಕಾರಿ ಅಂಶ ಪತ್ತೆಯಾಗಿದ್ದು, ಈ ವಿಷಕಾರಿ ಅಂಶವೇ ಸುನಂದಾ ಸಾವಿಗೆ ಕಾರಣ ಎಂದು ಹೇಳಲಾಗಿತ್ತು. ಆದರೆ, ಈ ವಿಷಕಾರಿ ಅಂಶಗಳನ್ನು ಅಧ್ಯಯನ ಮಾಡಲು ಭಾರತೀಯ ಪ್ರಯೋಗಾಲಯದಲ್ಲಿ ಸೌಲಭ್ಯಗಳಿಲ್ಲ ಎಂದು ಹೇಳಿದ್ದ ಅಧಿಕಾರಿಗಳು ಅಧ್ಯಯನ ನಡೆಸಲು ಮಾದರಿಯನ್ನು ಎಫ್ ಬಿಐ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.

ಇದೀಗ ಎಫ್ ಬಿಐ ಪ್ರಯೋಗಾಲಯದ ಅಧಿಕಾರಿಗಳು ಸುನಂದಾ ಸಾವಿನ ಕುರಿತ ವರದಿಯನ್ನು ಸಲ್ಲಿಸಿದ್ದು, ವರದಿಯಲ್ಲಿ ಸುನಂದಾ ಸಾವಿಗೆ ವಿಕಿರಣಗಳ ವಿಷ ಕಾರಣವಲ್ಲ. ದೇಹದಲ್ಲಿ ಪತ್ತೆಯಾದ ವಿಷವು ಸಾವನ್ನುಂಟು ಮಾಡುವಷ್ಟು ವಿಷಕಾರಿಯಾಗಿಲ್ಲ ಎಂದು ಹೇಳಿದ್ದಾರೆ.

2014ರ ಜನವರಿ 17 ರಂದು ದೆಹಲಿಯ ಪಂಚತಾರಾ ಹೋಟೆಲ್ ನಲ್ಲಿ ಸುನಂದಾ ಪುಷ್ಕರ್ ಅವರ ಮೃತ ದೇಹ ಪತ್ತೆಯಾಗಿತ್ತು. ಈ ಸಾವು ಸಾಕಷ್ಟು ಅನುಮಾನಕ್ಕೆ ದಾರಿ ಮಾಡಿಕೊಟ್ಟಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!