ಸಾಂದರ್ಭಿಕ ಚಿತ್ರ 
ದೇಶ

ಭಾರತದಲ್ಲಿ ಅತ್ಯಾಚಾರ ಪ್ರಮಾಣ ದುಪ್ಪಟ್ಟು

ಮಕ್ಕಳು, ಮಹಿಳೆಯರು, ಹಾಗೂ ವೃದ್ದೆಯರ ಮೇಲಿನ ಅತ್ಯಾಚಾರ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. 2001 ರಿಂದ 2014 ರವರೆಗೆ ದೇಶದಲ್ಲಿ...

ತಿರುವನಂತಪುರ: ಮಕ್ಕಳು, ಮಹಿಳೆಯರು, ಹಾಗೂ ವೃದ್ದೆಯರ ಮೇಲಿನ ಅತ್ಯಾಚಾರ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. 2001 ರಿಂದ 2014 ರವರೆಗೆ ದೇಶದಲ್ಲಿ ಅತ್ಯಾಚಾರ ಸಂಖ್ಯೆ ದ್ವಿಗುಣಗೊಂಡಿದೆ.

ಕೊವಲಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಿಂಗ ಸಮಾನತೆ ಹಾಗೂ ಭಾರತದಲ್ಲಿ ಮಹಿಳೆಯ ಸ್ಥಿತಿಗತಿ ಸಂಬಂಧ ಬಿಡುಗಡೆಗೊಳಿಸಿದ ವರದಿಯಲ್ಲಿ ಈ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ.

2001 ರಲ್ಲಿ  16, 075 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದವು, ಆದರೆ 2014 ರಲ್ಲಿ 36, 375 ಮಾನಭಂಗ ಪ್ರಕರಣಗಳು ದಾಖಲಾಗಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

ಇದರಲ್ಲಿ ವಿವಾಹಿತ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಿವೆ. 49,170 ಪ್ರಕರಣ ದಾಖಲಾಗಿದ್ದುದ್ದು, 2014ರ ವೇಳೆಗೆ 122,877 ಪ್ರಕರಣ ದಾಖಲಾಗಿವೆ.

ಇನ್ನು ಮನೆಯಿಂದಲೇ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಮನೆಯೇ ಪ್ರಮುಖ ವೇದಿಕೆಯಾಗಿದೆ. ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯಗಳು ಮನೆಯಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತವೆ ಎಂದು, ಭಾರತದಲ್ಲಿ ಮಹಿಳೆಯರ ಸ್ಥಿತಿಗತಿ  ಉನ್ನತ ಸಮಿತಿಯ ಅಧ್ಯಕ್ಷ ರಜಪೂತ್ ಹೇಳಿದ್ದಾರೆ. ಪ್ರಪಂಚದಲ್ಲಿಯೇ ಭಾರತದಲ್ಲಿ ಲಿಂಗ ತಾರತಮ್ಯ ಅತಿ ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್