ಜೈಪುರ: ಅಂಬುಲೆನ್ಸ್ ನಲ್ಲಿ ಮೃತದೇಹವನ್ನು ಸಾಗಿಸುತ್ತಿದ್ದ ವೇಳೆ ಟ್ರಕ್‌ಗೆ ಅಂಬುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಅಂಬುಲೆನ್ಸ್‌ನಲ್ಲಿದ್ದ ಐವರು ದಾರುಣವಾಗಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಜಾಲೂರ್ ಜಿಲ್ಲೆಯಲ್ಲಿ ನಡೆದಿದೆ.
ಮೃತ ಎಂಟು ವರ್ಷದ ಬಾಲಕಿಯ ದೇಹವನ್ನು ಅಂಬುಲೆನ್ಸ್‌ನಲ್ಲಿ ಗುಜರಾತ್‌ನ ಬಾರ್ಮೇರ್ ಎಂಬಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಮೃತ ಬಾಲಕಿಯ ಸಂಬಂಧಿಕರು ಅಂಬುಲೆನ್ಸ್‌ನಲ್ಲಿದ್ದು, ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಇನ್ನುಳಿದಂತೆ ಓರ್ವ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದಲ್ಲಿ ಮೃತಪಟ್ಟವರ ಮರಣೋತ್ತರ ಪರೀಕ್ಷೆಯ ಬಳಿಕ ಅವರ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.