ಪ್ಯಾರಿಸ್ : ಫ್ರಾನ್ಸ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಯಾವುದೇ ಭಾರತೀಯರು ಗಾಯಗೊಂಡಿಲ್ಲ, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟ ಪಡಿಸಿದ್ದಾರೆ.
ಫ್ರಾನ್ಸ್ ನಲ್ಲಿರುವ ಭಾರತೀಯ ರಾಯಭಾರಿಯೊಂದಿಗೆ ಚರ್ಚಿಸಿದ್ದೇನೆ, ಅಲ್ಲಿರುವ ಎಲ್ಲಾ ಭಾರತೀಯರು ಸುರಕ್ಷಿತವಾಗಿದ್ದಾರೆಂದು ಅವರು ಮಾಹಿತಿ ನೀಡಿರುವುದಾಗಿ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಪ್ರಾದೇಶಿಕ ಭಾರತೀಯ ಪ್ರವಾಸಿ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ಲಾಸ್ ಏಂಜಲೀಸ್ ಗೆ ತೆರಳಿರುವ ಸುಷ್ಮಾ ಸ್ವರಾಜ್ ಪ್ರಾನ್ಸ್ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆಂದು ಟ್ವೀಟ್ ಮಾಡಿದ್ದಾರೆ.
ಫ್ರಾನ್ಸ್ ನಲ್ಲಿರುವ ಭಾರತೀಯರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದು, ಸಾಮಾಜಿಕ ಮಾಧ್ಯಮಗಳ ಮೂಲಕ ಅವರು ಸಂವಹನ ನಡೆಸುತ್ತಿದ್ದಾರೆ ಎಂದು ಭಾರತೀಯ ರಾಯಭಾರಿ ತಿಳಿಸಿದ್ದಾರೆ ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ.